AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ದಾಖಲೆಯ 3,800 ರೂ. ಕುಸಿತ ಕಂಡ ಬೆಳ್ಳಿ ಬೆಲೆ; ಇಂದಿನ ಚಿನ್ನದ ದರ ಹೀಗಿದೆ

Silver Price Today: ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 48,250 ರೂ. ಇದ್ದುದು 48,600 ರೂ. ಆಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ 4,400 ರೂ. ಏರಿಕೆ ಕಂಡಿತ್ತು. ಆದರೆ, ಇಂದು 3,800 ರೂ. ಕುಸಿತ ಕಂಡಿದೆ.

Gold Price Today: ದಾಖಲೆಯ 3,800 ರೂ. ಕುಸಿತ ಕಂಡ ಬೆಳ್ಳಿ ಬೆಲೆ; ಇಂದಿನ ಚಿನ್ನದ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Apr 12, 2022 | 5:51 AM

Share

ಬೆಂಗಳೂರು: ಕಳೆದ ವಾರ ಭಾರೀ ಏರಿಕೆಯಾಗಿದ್ದ ಚಿನ್ನದ ಬೆಲೆ 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಚಿನ್ನದ ದರ (Gold Rate) ಇಂದು ಕೂಡ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಬೆಳ್ಳಿಯ ಬೆಲೆ (Silver Price) ನಿನ್ನೆ 4,400 ರೂ. ಏರಿಕೆಯಾಗಿದ್ದುದು ಇಂದು ಒಂದೇ ದಿನದಲ್ಲಿ 3,800 ರೂ. ಕುಸಿತ ಕಂಡಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 48,250 ರೂ. ಇದ್ದುದು 48,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,630 ರೂ. ಇದ್ದುದು 53,020 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,460 ರೂ. ಮುಂಬೈ- 48,600 ರೂ, ದೆಹಲಿ- 48,600 ರೂ, ಕೊಲ್ಕತ್ತಾ- 48,600 ರೂ, ಬೆಂಗಳೂರು- 48,600 ರೂ, ಹೈದರಾಬಾದ್- 48,600 ರೂ, ಕೇರಳ- 48,600 ರೂ, ಪುಣೆ- 48,700 ರೂ, ಮಂಗಳೂರು- 48,600 ರೂ, ಮೈಸೂರು- 48,600 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,960 ರೂ, ಮುಂಬೈ- 53,020 ರೂ, ದೆಹಲಿ- 53,020 ರೂ, ಕೊಲ್ಕತ್ತಾ- 53,020 ರೂ, ಬೆಂಗಳೂರು- 53,020 ರೂ, ಹೈದರಾಬಾದ್- 53,020 ರೂ, ಕೇರಳ- 53,020 ರೂ, ಪುಣೆ- 53,120 ರೂ, ಮಂಗಳೂರು- 53,020 ರೂ, ಮೈಸೂರು- 53,020 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಏರಿಳಿತವಾಗಿಲ್ಲ. ಬೆಳ್ಳಿ ಬೆಲೆ (Silver Price) ಭಾರೀ ಕುಸಿತವಾಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ 1 ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ 4,400 ರೂ. ಏರಿಕೆ ಕಂಡಿತ್ತು. ಆದರೆ, ಇಂದು 3,800 ರೂ. ಕುಸಿತ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 71,500 ರೂ. ಇದ್ದುದು ಇಂದು 67,700 ರೂ.ಗೆ ಕುಸಿತವಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,300 ರೂ, ಮೈಸೂರು- 72,300 ರೂ., ಮಂಗಳೂರು- 72,300 ರೂ., ಮುಂಬೈ- 67,700 ರೂ, ಚೆನ್ನೈ- 72,300 ರೂ, ದೆಹಲಿ- 67,700 ರೂ, ಹೈದರಾಬಾದ್- 72,300 ರೂ, ಕೊಲ್ಕತ್ತಾ- 67,700 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಒಂದೇ ದಿನದಲ್ಲಿ 4,200 ರೂ. ಕುಸಿತ ಕಂಡ ಬೆಳ್ಳಿ ದರ

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಭಾರೀ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ