Gold silver Price Today | ಬೆಂಗಳೂರು: ಈ ವಾರದಲ್ಲಿ ಆಭರಣದ ದರ ವಿವರ ಗಮನಿಸಿದಾಗ ಪ್ರಾರಂಭದ ಮೊದಲೆರಡು ದಿನ ಚಿನ್ನ ಮತ್ತು ಬೆಳ್ಳಿಯ ದರ ಇಳಿಕೆಯತ್ತ ಸಾಗಿತ್ತು. ಬಳಿಕ ಚಿನ್ನದ ದರ ಕೊಂಚ ಏರಿಕೆ ಕಂಡಿತು. ಆದರೆ ಬೆಳ್ಳಿ ದರ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ನಿನ್ನೆಯೂ ಸಹ ಚಿನ್ನದ ದರ ಏರಿಕೆ ಕಂಡಿದ್ದು, ಬೆಳ್ಳಿ ದರ ಕೊಂಚ ಇಳಿಕೆ ಆಗಿತ್ತು. ಆದರೆ ಇಂದು ( ಜುಲೈ 30, ಶುಕ್ರವಾರ) ಚಿನ್ನದ ದರ ಕೊಂಚ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿದೆ.
ಆಭರಣ ಕೊಳ್ಳುವ ಆಸೆ ಇದ್ದೇ ಇರುತ್ತದೆ. ಜತೆಗೆ ಚಿನ್ನಾಭರಣವನ್ನು ಖರೀದಿಸುವಾಗ ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಚಿನ್ನಾಭರಣ ಕೊಳ್ಳುವ ಕುರಿತಾಗಿ ಯೋಚನೆ ಇರುವುದು ಸಹಜ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಏಳಿತ ಕಾಣುತ್ತಿರುವುದು ಸಹಜ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳಬೇಕು ಅಂದನಿಸಿದರೆ ಚಿನ್ನ, ಬೆಳ್ಳಿ ಖರೀದಿಸುವತ್ತ ಯೋಚಿಸಿ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,910 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,49,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,000 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,90,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಸಹ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 67,210 ರೂಪಾಯಿ ಆಗಿದೆ. 10 ರೂಪಾಯಿಯಷ್ಟು ಏರಿಕೆ ಆಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,310 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,53,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,430 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,94,300 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 10 ರೂಪಾಯಿ ಏರಿಕೆ ಬಳಿಕ, 72,210 ರೂಪಾಯಿ ಆಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,060 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,70,600 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,340 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,13,400 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 67,210 ರೂಪಾಯಿಗೆ ಏರಿಕೆಯಾಗಿದೆ.
ಇದನ್ನೂ ಓದಿ:
Gold Rate Today: ಚಿನ್ನದ ದರ ಸ್ಥಿರತೆಯಲ್ಲಿದೆ, ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ಯೋಚಿಸಿ