Gold Silver Price Today | ಬೆಂಗಳೂರು: ಕಳೆದ ಎರಡು ದಿನಗಳಿಂದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ (Gold Price), ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಬೆಳ್ಳಿ ದರದಲ್ಲಿ (Silver Price) ಅಲ್ಪ ಪ್ರಮಾಣದಲ್ಲಿಇಳಿಕೆ ಆಗಿತ್ತು. ಇಂದು ( ಸೆಪ್ಟೆಂಬರ್ 16, ಗುರುವಾರ) ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. ಹಾಗಾದರೆ, ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಆಭರಣಗಳ ದರ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಅದೆಷ್ಟೋ ವರ್ಷಗಳಿಂದ ಚಿನ್ನಾಭರಣ ಖರೀದಿಸಬೇಕು ಎಂಬ ಆಸೆಯಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತೀರಿ. ಹಾಗಾಗಿಯೇ ಚಿನ್ನದ ದರ ಎಷ್ಟಿದೆ ಎಂಬ ಕುತೂಹಲ ಪ್ರತಿನಿತ್ಯವೂ ಕೆರಳುತ್ತದೆ. ಇಂದು ಬೆಂಗಳೂರು ಸೇರಿ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಏರಿಕೆ ಆಗಿದೆ. ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಬೆಳ್ಳಿ ದರದಲ್ಲಿಯೂ ಸಹ ಇಂದು ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಿದೆ.
ಬೆಂಗಳೂರಿನಲ್ಲಿ 2 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,400 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 63,400 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,660 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,700 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,670 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,06,700 ರೂಪಾಯಿ ಇದೆ. ಸುಮಾರು 3,300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ 200 ರೂಪಾಯಿ ಏರಿಕೆ ಬಳಿಕ, ಕೆಜಿ ಬೆಳ್ಳಿಗೆ 63,400 ರೂಪಾಯಿ ಏರಿಕೆಯಾಗಿದೆ.
ಇದನ್ನೂ ಓದಿ:
Gold Price Today: ಚಿನ್ನ ಖರೀದಿಸುವ ಪ್ಲ್ಯಾನ್ ಇದೆಯಾ? ಇಂದು ಸಹ ಆಭರಣ ಬೆಲೆಯಲ್ಲಿ ಇಳಿಕೆ
(Gold price today increased 0n 2021 September 16 check silver price in Bangalore Delhi Mumbai and minor city)
Published On - 7:51 am, Thu, 16 September 21