Gold Silver Rate Today| ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು (ಅಕ್ಟೋಬರ್ 2, ಶನಿವಾರ) ಏರಿಕೆಯಾಗಿದೆ. ನಿನ್ನೆ ಚಿನ್ನ(Gold Price) ಮತ್ತು ಬೆಳ್ಳಿಯ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರಿಯರ ಮೊಗದಲ್ಲಿ ಮಂದಹಾಸ ಮೂಡಿತ್ತು. ಆದರೆ ಇಂದು ಆಭರಣಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಗ್ರಾಹಕರಲ್ಲಿ ಕೊಂಚ ಬೇಸರ ಮೂಡಿದೆ. ಇಂದು ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,350 ರೂಪಾಯಿ ಆಗಿದೆ. ಅಂತೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 43,400 ರೂಪಾಯಿ ಆಗಿದೆ. ಸರಿಸುಮಾರು 350 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, 1 ಕೆಜಿ ಬೆಳ್ಳಿಗೆ 59,500 ರೂಪಾಯಿ ಆಗಿದೆ. ಆ ಮೂಲಕ ಬೆಳ್ಳಿ(Silver Price) ಬೆಲೆಯಲ್ಲಿ 1,200 ರೂಪಾಯಿ ಏರಿಕೆಯಾಗಿದೆ.
ಚಿನ್ನ, ಬೆಳ್ಳಿ ದರ ಏರಿಳಿತ ಕಾಣುವುದು ಸರ್ವೇ ಸಾಮಾನ್ಯ. ನೀವು ಸಂಗ್ರಹಿಸಿದ ಹಣಕ್ಕೆ ಆಭರಣ ಖರೀದಿಸಬೇಕು ಎಂದೆನಿಸಿದರೆ ದರ ವಿವರ ಪರಿಶೀಲಿಸಿ. ಸರಿ ಹೊಂದುವುದಾದರೆ ಆಭರಣ ಕೊಳ್ಳುವತ್ತ ಯೋಚಿಸಬಹುದು. ಕೇವಲ ಆಭರಣಗಳನ್ನು ತೊಟ್ಟು ಸಂತೋಷ ಪಡುವುದೊಂದೇ ಅಲ್ಲದೇ ಹೂಡಿಕೆಯ ದೃಷ್ಟಿಯಿಂದ ಚಿನ್ನವನ್ನು ಖರೀದಿಸುವುದುಂಟು. ಹಾಗಾಗಿ ಚಿನ್ನದ ಮಾರುಕಟ್ಟೆಯ ಕುರಿತಾಗಿ ಕುತೂಹಲ ಇದ್ದೇ ಇರುತ್ತದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,600 ರೂಪಾಯಿ ಏರಿಕಾಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,100 ರೂಪಾಯಿ ನಿಗದಿಯಾಗಿದೆ. ಸುಮಾರು 6,100 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 63,700 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,470 ರೂಪಾಯಿ ಹಾಗೂ 100 ಗ್ರಾಮ ಚಿನ್ನಕ್ಕೆ 4,54,700 ರೂಪಾಯಿ ನಿಗದಿಯಾಗಿದೆ. ಸುಮಾರು 9,800 ರೂಪಾಯಿ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 9,800 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 59,500 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತಷ್ಟು ಇಳಿಕೆ; ಗ್ರಾಹಕರಿಗೆ ಸಂತೋಷ ನೀಡುವ ವಿಚಾರ
Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!