Gold Silver Rate Today| ಬೆಂಗಳೂರು: ನಿನ್ನೆ ಸಹ ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದೆ. ಆ ಬಳಿಕ ಇಂದು ( ಅಕ್ಟೋಬರ್ 3, ಭಾನುವಾರ) ಮತ್ತೆ ಚಿನ್ನ, ಬೆಳ್ಳಿ ದರ (Silver Price) ಏರಿಕೆ ಕಂಡಿದೆ. ಚಿನ್ನ ಖರೀದಿಸುವಾಗ ಆಭರಣದ ದರ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆ ಗ್ರಾಹಕರದ್ದು. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣದ (Gold price) ದರ ಏರಿಳಿತ ಕಾಣುತ್ತಿರುವುದು ಸಾಮಾನ್ಯ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ. ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,500 ರೂಪಾಯಿ ಹಾಗೂ 100 ಗ್ರಾಂ ಚಿನ್ನ 4,35,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,460 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,74,600 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 1,100 ರೂಪಾಯಿ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 1,000 ರೂಪಾಯಿ ಏರಿಕೆ ಕಂಡು ಬಂದಿದ್ದು, 60,500 ರೂಪಾಯಿ ನಿಗದಿ ಮಾಡಲಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,710 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,97,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 60,500 ರೂಪಾಯಿ ನಿಗದಿಯಾಗಿದೆ. ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,480 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,54,800 ರೂಪಾಯಿ ಇದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 60,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಕೆಲವೆಡೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ!
Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಇದೆಯಾ? ಆಭರಣಗಳ ಬೆಲೆ ಇಳಿಕೆಯಾಗಿದೆ!
Published On - 7:57 am, Sun, 3 October 21