Gold Silver Price Today | ಬೆಂಗಳೂರು: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರ ಸ್ಥಿರವಾಗಿತ್ತು. ಅದಕ್ಕೂ ಮುಂಚೆ ಕಳೆದ ನಾಲ್ಕೈದು ದಿನಗಳಲ್ಲಿ ಆಭರಣಗಳ ಬೆಲೆ ಇಳಿಕೆ ಕಂಡಿತ್ತು. ಇಂದು (ಸೆಪ್ಟೆಂಬರ್ 28, ಮಂಗಳಾರ) ಚಿನ್ನ (Gold Price), ಬೆಳ್ಳಿ ದರ (Silver Price) ಬೆಂಗಳೂರಿನಲ್ಲಿ ಏರಿಕೆ ಕಂಡಿದೆ. ಇನ್ನು ಕೆಲವು ಕಡೆ ಇಳಿಕೆ ಕಂಡಿದ್ದರೆ ಹಲವೆಡೆ ಏರಿಕೆ ಆಗಿದೆ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಇಂದು ದರ ಎಷ್ಟು ಏರಿಕೆ ಆಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳೆರಡೂ ಏರಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,33,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 60,250 ರೂಪಾಯಿ ನಿಗದಿ ಆಗಿದೆ. ಸುಮಾರು 350 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,510 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ4,35,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,74,700 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 300 ರೂಪಾಯಿ ಇಳಿಕೆ ಕಮಡು ಬಂದಿದ್ದು, 64,400 ರೂಪಾಯಿ ನಿಗದಿಯಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ನಿಗದಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,640 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!
Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಬದಲಾವಣೆಗಳಿಲ್ಲ!
(Gold price today increased on 2021 September 28 check silver price in bangalore delhi mumbai and minor city)
Published On - 7:48 am, Tue, 28 September 21