Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಕೊಂಚ ಏರಿಕೆ; ಬೆಂಗಳೂರು ಹಾಗೂ ಪ್ರಮುಖ ನಗರಗಳ ಇಂದಿನ ದರ ತಿಳಿಯಿರಿ

Silver Price Today: ಭಾರತದ ಅನೇಕ ನಗರಗಳಲ್ಲಿ ನಿನ್ನೆಗಿಂತ ಇಂದು ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,400 ರೂ. ಇದ್ದುದು ಇಂದು 48,410 ರೂ.ಗೆ ಏರಿಕೆಯಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,800 ರೂ. ಇದ್ದುದು 52,810 ರೂ. ಆಗಿದೆ.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಕೊಂಚ ಏರಿಕೆ; ಬೆಂಗಳೂರು ಹಾಗೂ ಪ್ರಮುಖ ನಗರಗಳ ಇಂದಿನ ದರ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Mar 14, 2022 | 9:08 AM

ಬೆಂಗಳೂರು: ಕಳೆದ ಕೆಲವು ದಿನಗಳಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಬಹಳಷ್ಟು ಏರಿಳಿತ ಕಂಡುಬಂದಿದೆ. ಆಭರಣ ಖರೀದಿಸಲು ಆಸಕ್ತಿ ಇರುವವರಿಗೆ ಪ್ರತಿನಿತ್ಯವೂ ಚಿನ್ನ, ಬೆಳ್ಳಿ ದರ ಗಮನಿಸಿ ಒಡವೆ ಖರೀದಿ ಮಾಡುವಂತಾಗಿದೆ. ಅದರಲ್ಲೂ ಇನ್ನು ಮೇ ಅಂತ್ಯದವರೆಗೆ ಇನ್ನು ಶುಭ ಸಮಾರಂಭಗಳದ್ದೇ ಕಾರುಬಾರು. ಹೀಗಾಗಿ, ಚಿನ್ನ ಖರೀದಿಸಲು ಯೋಚಿಸಿದ್ದರೆ ಚಿನ್ನ, ಬೆಳ್ಳಿ ಬೆಲೆ ತಿಳಿಯುವುದು ಮುಖ್ಯ. ಇಂದು (ಮಾರ್ಚ್ 14, ಸೋಮವಾರ) 10 ಗ್ರಾಂ ಚಿನ್ನಕ್ಕೆ ಕೇವಲ 10 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಕೂಡ (Silver Price) ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ ನಿನ್ನೆಗಿಂತಲೂ ಇಂದು 4,400 ರೂ. ಏರಿಕೆ ಕಂಡಿದೆ. ಹೈದರಾಬಾದ್, ಕೊಲ್ಕತ್ತಾ, ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ.

ಭಾರತದ ಅನೇಕ ನಗರಗಳಲ್ಲಿ ನಿನ್ನೆಗಿಂತ ಇಂದು ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,400 ರೂ. ಇದ್ದುದು ಇಂದು 48,410 ರೂ.ಗೆ ಏರಿಕೆಯಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,800 ರೂ. ಇದ್ದುದು 52,810 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,950 ರೂ. ಮುಂಬೈ- 48,410 ರೂ, ದೆಹಲಿ- 48,410 ರೂ, ಕೊಲ್ಕತ್ತಾ- 48,410 ರೂ, ಬೆಂಗಳೂರು- 48,410 ರೂ, ಹೈದರಾಬಾದ್- 48,410 ರೂ, ಕೇರಳ- 48,410 ರೂ, ಪುಣೆ- 48,460 ರೂ, ಮಂಗಳೂರು- 48,410 ರೂ, ಮೈಸೂರು- 48,410 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,400 ರೂ, ಮುಂಬೈ- 52,810 ರೂ, ದೆಹಲಿ- 52,810 ರೂ, ಕೊಲ್ಕತ್ತಾ- 52,810 ರೂ, ಬೆಂಗಳೂರು- 52,810 ರೂ, ಹೈದರಾಬಾದ್- 52,810 ರೂ, ಕೇರಳ- 52,810 ರೂ, ಪುಣೆ- 52,860 ರೂ, ಮಂಗಳೂರು- 52,810 ರೂ, ಮೈಸೂರು- 52,810 ರೂ. ಇದೆ.

ಇಂದಿನ ಬೆಳ್ಳಿಯ ದರ: ಭಾರತದಲ್ಲಿ 1 ಕೆಜಿ ಬೆಳ್ಳಿ ದರ 70,300 ರೂ. ಇದ್ದುದು 74,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,700 ರೂ, ಮೈಸೂರು- 74,100 ರೂ., ಮಂಗಳೂರು- 74,700 ರೂ., ಮುಂಬೈ- 74,700 ರೂ, ಚೆನ್ನೈ- 74,700 ರೂ, ದೆಹಲಿ- 70,300 ರೂ, ಹೈದರಾಬಾದ್- 74,700 ರೂ, ಕೊಲ್ಕತ್ತಾ- 70,300 ರೂ. ಇದೆ.

ಇದನ್ನೂ ಓದಿ: Gold- Silver Rate: ಚಿನ್ನ, ಬೆಳ್ಳಿಯ ದರ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 10ನೇ ತಾರೀಕಿನಂದು ಹೀಗಿದೆ

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 9ನೇ ತಾರೀಕಿನ ಚಿನ್ನ, ಬೆಳ್ಳಿ ದರ ಇಲ್ಲಿದೆ

Published On - 9:08 am, Mon, 14 March 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ