AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಒಂದೇ ದಿನದಲ್ಲಿ 4,700 ರೂ. ಕುಸಿತ ಬೆಳ್ಳಿ ದರ; ಚಿನ್ನದ ಬೆಲೆಯೂ ಇಳಿಕೆ

Silver Price Today: ಭಾರತದಲ್ಲಿ ಬೆಳ್ಳಿಯ ಬೆಲೆ ನಿನ್ನೆಗಿಂತಲೂ ಇಂದು 4,700 ರೂ. ಇಳಿಕೆ ಕಾಣುವ ಮೂಲಕ ದಾಖಲೆ ಬರೆದಿದೆ. ಚಿನ್ನದ ಬೆಲೆಯಲ್ಲೂ ಕುಸಿತ ಕಂಡಿದೆ.

Gold Price Today: ಒಂದೇ ದಿನದಲ್ಲಿ 4,700 ರೂ. ಕುಸಿತ ಬೆಳ್ಳಿ ದರ; ಚಿನ್ನದ ಬೆಲೆಯೂ ಇಳಿಕೆ
ಚಿನ್ನ
TV9 Web
| Edited By: |

Updated on: Mar 15, 2022 | 5:46 AM

Share

ಬೆಂಗಳೂರು: ಭಾರತದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಇಳಿಮುಖವಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸಿದ್ದರೆ ಬಂಗಾರದ ಬೆಲೆ ಕಡಿಮೆಯಾಗಿದೆ. ಇಂದು ಒಂದೇ ದಿನದಲ್ಲಿ 10 ಗ್ರಾಂ ಚಿನ್ನಕ್ಕೆ 340 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ನಿನ್ನೆಗಿಂತಲೂ ಇಂದು 4,700 ರೂ. ಇಳಿಕೆ ಕಾಣುವ ಮೂಲಕ ದಾಖಲೆ ಬರೆದಿದೆ. ಹೀಗಾಗಿ ಬಂಗಾರ ಖರೀದಿಸಲು ಬಯಸುವವರಿಗೆ ಇದು ಸರಿಯಾದ ಸಮಯ. ತಿರುವನಂತಪುರಂ, ಹೈದರಾಬಾದ್, ಕೊಲ್ಕತ್ತಾ, ಬೆಂಗಳೂರು, ಚೆನ್ನೈ, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ ನಿನ್ನೆ ಕೊಂಚ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಕುಸಿತವಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,410 ರೂ. ಇದ್ದುದು ಇಂದು 48,100 ರೂ.ಗೆ ಕುಸಿತವಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,810 ರೂ. ಇದ್ದುದು 52,470 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,690 ರೂ. ಮುಂಬೈ- 48,100 ರೂ, ದೆಹಲಿ- 48,100 ರೂ, ಕೊಲ್ಕತ್ತಾ- 48,100 ರೂ, ಬೆಂಗಳೂರು- 48,100 ರೂ, ಹೈದರಾಬಾದ್- 48,100 ರೂ, ಕೇರಳ- 48,100 ರೂ, ಪುಣೆ- 48,200 ರೂ, ಮಂಗಳೂರು- 48,100 ರೂ, ಮೈಸೂರು- 48,100 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,120 ರೂ, ಮುಂಬೈ- 52,470 ರೂ, ದೆಹಲಿ- 52,470 ರೂ, ಕೊಲ್ಕತ್ತಾ- 52,470 ರೂ, ಬೆಂಗಳೂರು- 52,470 ರೂ, ಹೈದರಾಬಾದ್- 52,470 ರೂ, ಕೇರಳ- 52,470 ರೂ, ಪುಣೆ- 52,570 ರೂ, ಮಂಗಳೂರು- 52,470 ರೂ, ಮೈಸೂರು- 52,470 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಬೆಳ್ಳಿ ಬೆಲೆ ಬರೋಬ್ಬರಿ 4,700 ರೂ. ಕುಸಿತ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 74,700 ರೂ. ಇದ್ದುದು 70,000 ರೂ. ಆಗಿದೆ. ದಾಖಲೆಯ ಮಟ್ಟಕ್ಕೇರಿದ್ದ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಭಾರೀ ಕುಸಿತ ಕಂಡಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,200 ರೂ, ಮೈಸೂರು- 74,200 ರೂ., ಮಂಗಳೂರು- 74,200 ರೂ., ಮುಂಬೈ- 70,000 ರೂ, ಚೆನ್ನೈ- 74,200 ರೂ, ದೆಹಲಿ- 70,000 ರೂ, ಹೈದರಾಬಾದ್- 74,200 ರೂ, ಕೊಲ್ಕತ್ತಾ- 70,000 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಕೊಂಚ ಏರಿಕೆ; ಬೆಂಗಳೂರು ಹಾಗೂ ಪ್ರಮುಖ ನಗರಗಳ ಇಂದಿನ ದರ ತಿಳಿಯಿರಿ

ಬೆಳ್ಳಿಯ ಆಭರಣಗಳ ಬಣ್ಣವು ಕಪ್ಪು ಬಣ್ಣಕ್ಕೆ ತಿರುಗಿದೆಯೇ? ಮತ್ತೆ ಹೊಳಪನ್ನು ತರಲು ಈ ವಿಧಾನ ಅನುಸರಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ