AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ಬೆಲೆ ಒಂದೇ ದಿನದಲ್ಲಿ 1,100 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಎಷ್ಟಿದೆ?

Silver Price Today: ಎರಡು ದಿನಗಳ ಹಿಂದೆ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 1,100 ರೂ. ಇಳಿಕೆಯಾಗಿದೆ.

Gold Price Today: ಬೆಳ್ಳಿ ಬೆಲೆ ಒಂದೇ ದಿನದಲ್ಲಿ 1,100 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಎಷ್ಟಿದೆ?
ಚಿನ್ನದ ಆಭರಣ
TV9 Web
| Edited By: |

Updated on: Mar 27, 2022 | 5:46 AM

Share

ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇತ್ತು. ಆದರೆ, ಇಂದು ಚಿನ್ನದ ದರದಲ್ಲಿ (Gold Rate) ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ ಬೆಳ್ಳಿಯ ಬೆಲೆ (Silver Price) ಇಂದು 1 ಕೆಜಿಗೆ ಬರೋಬ್ಬರಿ 1,100 ರೂ. ಇಳಿಕೆಯಾಗಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು ಇಂದು ಕೂಡ 48,200 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 52,590 ರೂ. ಆಗಿಯೇ ಉಳಿದಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 2 ದಿನಗಳ ಹಿಂದೆ ಇದ್ದ ಚಿನ್ನದ ಬೆಲೆ ಇಂದು ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,540 ರೂ. ಮುಂಬೈ- 48,200 ರೂ, ದೆಹಲಿ- 48,200 ರೂ, ಕೊಲ್ಕತ್ತಾ- 48,200 ರೂ, ಬೆಂಗಳೂರು- 48,200 ರೂ, ಹೈದರಾಬಾದ್- 48,200 ರೂ, ಕೇರಳ- 48,200 ರೂ, ಪುಣೆ- 48,300 ರೂ, ಮಂಗಳೂರು- 48,200 ರೂ, ಮೈಸೂರು- 48,200 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,960 ರೂ, ಮುಂಬೈ- 52,590 ರೂ, ದೆಹಲಿ- 52,590 ರೂ, ಕೊಲ್ಕತ್ತಾ- 52,590 ರೂ, ಬೆಂಗಳೂರು- 52,590 ರೂ, ಹೈದರಾಬಾದ್- 52,590 ರೂ, ಕೇರಳ- 52,590 ರೂ, ಪುಣೆ- 52,690 ರೂ, ಮಂಗಳೂರು- 52,590 ರೂ, ಮೈಸೂರು- 52,590 ರೂ. ಇದೆ. ಚಿನ್ನದ ಬೆಲೆಯ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಇಂದಿನ ಬೆಳ್ಳಿಯ ದರ: ಎರಡು ದಿನಗಳ ಹಿಂದೆ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 1,100 ರೂ. ಇಳಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 73,400 ರೂ. ಇದ್ದುದು ಇಂದು 68,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 73,400 ರೂ, ಮೈಸೂರು- 73,400 ರೂ., ಮಂಗಳೂರು- 73,400 ರೂ., ಮುಂಬೈ- 68,900 ರೂ, ಚೆನ್ನೈ- 73,400 ರೂ, ದೆಹಲಿ- 68,900 ರೂ, ಹೈದರಾಬಾದ್- 73,400 ರೂ, ಕೊಲ್ಕತ್ತಾ- 68,900 ರೂ. ಇದೆ.

ಇದನ್ನೂ ಓದಿ: Gold Price Today: ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 73 ಸಾವಿರದ ಗಡಿ ತಲುಪಿದ ಬೆಳ್ಳಿ ದರ

Gold Price Today: 2 ದಿನಗಳ ಬಳಿಕ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 1,300 ರೂ. ಇಳಿಕೆ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ