Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,600 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,36,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಏರಿಕೆಯಾಗಿದೆ.

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?
ಚಿನ್ನಾಭರಣ
Updated By: preethi shettigar

Updated on: Aug 13, 2021 | 7:50 AM

Gold Silver Price Today | ಬೆಂಗಳೂರು: ಚಿನ್ನ, ಬೆಳ್ಳಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಆಭರಣ ಪ್ರಿಯರಂತೂ ಚಿನ್ನಕ್ಕೆ ಮುಗಿಬೀಳುತ್ತಾರೆ. ಕೊಡಿಸುವವರು ತಲೆ ಕೆಡಿಸಿಕೊಳ್ಳಬೇಕೆ ವಿನಾಃ ಕೊಳ್ಳುವವರಿಗೆ ತಲೆಬಿಸಿ ಏಕೆ? ಹಾಗಿದ್ದಾಗ ಚಿನ್ನದ ದರ (Gold Price) ಮತ್ತು ಬೆಳ್ಳಿ ದರ (Silver Price) ಇಂದು (ಆಗಸ್ಟ್ 13, ಶುಕ್ರವಾರ)ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಚಿನ್ನ ಮತ್ತು ಬೆಳ್ಳಿಯ ದರ ಹಾವು ಏಣಿ ಆಡುವುದು ಸಾಮಾನ್ಯ. ದಿನದಿಂದ ದಿನಕ್ಕೆ ದರದಲ್ಲಿ ಏರಿಕೆ ಅಥವಾ ಇಳಿಕೆಯತ್ತ ಸಾಗುತ್ತವೆ. ಹೀಗಾಗಿ ಚಿನ್ನ ಖರೀದಿಸಬಹುದೇ? ಅಥವಾ ಹೂಡಿಕೆ ಮಾಡಬಹುದೇ? ಎಂಬ ಗೊಂದಲಕ್ಕೆ ಜನ ಒಳಗಾಗಿದ್ದಾರೆ. ದರ ಕಡಿಮೆ ಇದ್ದಾಗ ಚಿನ್ನ ಖರೀದಿಸುವುದು ಉತ್ತಮ. ಕಷ್ಟ ಕಾಲದಲ್ಲಿ ಚಿನ್ನ ಸಹಾಯಕ್ಕೆ ಬರುವುದು. ಚಿನ್ನದ ಮೇಲೆ ಹೂಡಿಕೆ ಮಾಡಿ, ಕಷ್ಟ ಕಾಲದಲ್ಲಿ ಬಳಸಿಕೊಳ್ಳುವವರು ಸ್ವಲ್ಪ ಯೋಚಿಸಿ.

ಚಿನ್ನದ ದರ ವಿವರ
ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,600 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,36,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,560 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,75,600 ರೂಪಾಯಿ ನಿಗದಿಯಾಗಿದೆ. ದೈನಂದಿನ ಬದಲಾವಣೆಯಲ್ಲಿ 2,600 ರೂಪಾಯಿ ಏರಿಕೆಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,860 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,38,600 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,850 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,78,500 ರೂಪಾಯಿ ಇದೆ. ದೈನಂದಿನ ಬದಲಾವಣೆಯಲ್ಲಿ 1,600 ರೂಪಾಯಿ ಏರಿಕೆಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,57,500 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,910 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,99,100 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,540 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,55,400 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಏರಿಕೆಯಾಗಿದೆ.

ಬೆಳ್ಳಿ ದರ ವಿವರ
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕೊಂಚ ಇಳಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಆ ಬಳಿಕ 62,300 ರೂಪಾಯಿ ನಿಗದಿ ಮಾಡಲಾಗಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿ ಬೆಲೆ 67,500 ರೂಪಾಯಿ ಇದ್ದು, 400 ರೂಪಾಯಿ ಇಳಿಕೆಯಾಗಿದೆ.

ದೆಹಲಿಯಲ್ಲಿ ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿದೆ. ಆ ಬಳಿಕ 63,300 ರೂಪಾಯಿ ನಿಗದಿಯಾಗಿದೆ. ಮುಂಬೈನಲ್ಲಿಯೂ ಸಹ ದರ ಇಳಿಕೆ ಆಗಿದ್ದು 300 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 63,300 ರೂಪಾಯಿ ಆಗಿದೆ. ಒಟ್ಟಾರೆ ಕೆಲವು ನಗರಗಳಲ್ಲಿ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ.

ಇದನ್ನೂ ಓದಿ:
Gold Rate Today: ನಿಶ್ಚಿತಾರ್ಥಕ್ಕಾಗಿ ಚಿನ್ನದ ಉಂಗುರ ಕೊಳ್ಳಬೇಕೆ? ಇಂದು ಆಭರಣದ ಬೆಲೆ ಕೊಂಚ ಇಳಿಕೆಯಾಗಿದೆ ಪರಿಶೀಲಿಸಿ

Gold Silver Price: ಚಿನ್ನ ದರ ಏರಿಕೆ, ಬೆಳ್ಳಿ ದರ ಇಳಿಕೆ.. ಎಷ್ಟಿದೆ ಗೊತ್ತಾ ಇಂದಿನ ದರ?