Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

| Updated By: preethi shettigar

Updated on: Dec 10, 2021 | 7:36 AM

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

Gold and Silver Price Today | ಬೆಂಗಳೂರು: ಚಿನ್ನ ಕೊಳ್ಳುವ ಸಮಯದಲ್ಲಿ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್​ 08, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿ ಇಳಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 65,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಇಳಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,100 ರೂಪಾಯಿ ಬದಲಾವಣೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ. ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Published On - 7:16 am, Wed, 8 December 21