AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Gold Rate Today: ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್​ 10, ಶುಕ್ರವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on:Dec 10, 2021 | 7:41 AM

Gold and Silver Price Today | ಬೆಂಗಳೂರು: ಚಿನ್ನ ಕೊಳ್ಳುವ ಸಮಯದಲ್ಲಿ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್​ 10, ಶುಕ್ರವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದ್ದು, ಕೆಜಿ ಬೆಳ್ಳಿಗೆ 61,600 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿ ಇಳಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 65,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,600 ರೂಪಾಯಿ ದಾಖಲಾಗಿದೆ. ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Gold Price Today: ಬೆಂಗಳೂರಿನಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ

Published On - 7:30 am, Fri, 10 December 21

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ