Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,960 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ.
Gold and Silver Price Today | ಬೆಂಗಳೂರು: ಇದೀಗ ಮದುವೆ, ಇನ್ನಿತರ ಸಮಾರಂಭಗಳು ಹೆಚ್ಚಾಗಿ ನಡೆಯುವ ಸಮಯ. ಇಂತಹ ಸನ್ನಿವೇಶದಲ್ಲಿ ಚಿನ್ನ ಕೊಳ್ಳುವ ಬಯಕೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಹೀಗಾಗಿ ಚಿನ್ನದ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಅದರಲ್ಲೂ ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 11, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,960 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,030 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದ್ದು, ಕೆಜಿ ಬೆಳ್ಳಿಗೆ 60,700 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿ ಇಳಿಕೆಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,960 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿ ಇಳಿಕೆಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,700 ರೂಪಾಯಿ ದಾಖಲಾಗಿದೆ. ಸುಮಾರು 900 ರೂಪಾಯಿ ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ: Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Published On - 7:25 am, Sat, 11 December 21