Gold and Silver Price Today| ಬೆಂಗಳೂರು: ಚಿನ್ನದ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಅದರಲ್ಲೂ ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 12, ಭಾನುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,700 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಏರಿಕೆಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,300 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,500 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಕೂಡ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 65,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 300 ರೂಪಾಯಿ ಏರಿಕೆಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ. ಸುಮಾರು 500 ರೂಪಾಯಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Published On - 7:25 am, Sun, 12 December 21