Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದು ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 13, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ನೋಡಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Gold Price Today: ಬೆಂಗಳೂರಿನಲ್ಲಿ ಮತ್ತಷ್ಟು ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಂದಿನ ದರ ವಿವರ ಇಲ್ಲಿದೆ ನೋಡಿ
Published On - 7:31 am, Mon, 13 December 21