Gold Price Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಗೂ ಮುನ್ನವೇ ದರ ವಿವರ ಪರಿಶೀಲಿಸಿ
Gold Rate Today: ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಡಿಸೆಂಬರ್ 14, ಮಂಗಳವಾರ) ಕೂಡ ಚಿನ್ನದ ದರ ಏರಿಕೆಯಾಗಿದೆ. ಬೆಳ್ಳಿ ದರ ಕೂಡ ಏರಿಕೆಯತ್ತ ಸಾಗಿದೆ.
Gold and Silver Price Today| ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಡಿಸೆಂಬರ್ 14, ಮಂಗಳವಾರ) ಕೂಡ ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 200 ಏರಿಕೆಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1000 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ: Gold Price Today: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ
Published On - 7:31 am, Tue, 14 December 21