AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ನೀವು ಕೊಳ್ಳುವ ಆಭರಣಕ್ಕೆ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಕಂಡು ಬಂದಿದೆ.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ನೀವು ಕೊಳ್ಳುವ ಆಭರಣಕ್ಕೆ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 15, 2021 | 7:35 AM

Share

Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದು ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 15, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ನೋಡಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ಏರಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 900 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,500 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:22 am, Wed, 15 December 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ