Gold Price Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಇಳಿಕೆಯಾಯ್ತು ಚಿನ್ನದ ದರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?
Gold Rate Today: ಇಂದು ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಇಳಿಕೆಯಾಗಿದೆ. ಯಾವ್ಯಾವ ನಗರಗಳಲ್ಲಿ ಎಷ್ಟೆಷ್ಟು ದರವಿದೆ ಎಂಬ ಮಾಹಿತಿ ಇಲ್ಲಿದೆ.
Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 16, ಗುರುವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಬರೋಬ್ಬರಿ 2,500 ರೂ ಇಳಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,600 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 60,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂ ಇಳಿಕೆಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,900 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,600 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,960 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,100 ರೂಪಾಯಿ ನಿಗದಿಯಾಗಿದ್ದು, ಬೆಲೆಯಲ್ಲಿ ಬರೋಬ್ಬರಿ 2,400 ರೂ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,900 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಹರಿವು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Published On - 8:00 am, Thu, 16 December 21