Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

| Updated By: preethi shettigar

Updated on: Dec 19, 2021 | 7:36 AM

Gold Rate Today: ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
Follow us on

Gold and Silver Price Today| ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಡಿಸೆಂಬರ್ 19, ಭಾನುವಾರ) ಚಿನ್ನದ ದರ (Gold Price) ಸ್ಥಿರವಾಗಿದೆ. ಬೆಳ್ಳಿ ದರ (Silver Price) ಮಾತ್ರ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅಂದರೆ ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಬೆಳ್ಳಿ ಬೆಲೆ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 62,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ಇಳಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,200 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:
Gold Price Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಗೂ ಮುನ್ನವೇ ದರ ವಿವರ ಪರಿಶೀಲಿಸಿ

Gold Price Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಇಳಿಕೆಯಾಯ್ತು ಚಿನ್ನದ ದರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?

 

Published On - 7:27 am, Sun, 19 December 21