Gold Rate: ಮತ್ತಷ್ಟು ಏರಿಕೆಯಾದ ಚಿನ್ನ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ.
Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಸಾಮಾನ್ಯವಾಗಿ ಎಲ್ಲರ ಆಯ್ಕೆ ಆಭರಣ ಮತ್ತು ಉಡುಪಿನದ್ದೇ ಆಗಿರುತ್ತದೆ. ಅದರಲ್ಲೂ ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್ಗೆ ತಕ್ಕವು ಯಾವುದು ಎಂದು ಸದಾ ಯೋಚಿಸುತ್ತಿರುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇನ್ನು ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 27, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 62,300 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,520 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,660 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರತವಾಗಿದ್ದು, ಕೆಜಿ ಬೆಳ್ಳಿ ಬೆಲೆ 62,300 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ: Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ
Published On - 7:28 am, Mon, 27 December 21