Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

| Updated By: preethi shettigar

Updated on: Dec 28, 2021 | 7:37 AM

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 900 ರೂಪಾಯಿ ಏರಿಕೆಯಾಗಿದೆ.

Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us on

Gold and Silver Price Today|ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ನಿನ್ನೆ ಆಭರಣದ ಬೆಲೆ ಏರಿಕೆಯತ್ತ ಸಾಗಿತ್ತು. ಇಂದು (ಡಿಸೆಂಬರ್ 28, ಮಂಗಳವಾರ) ಕೂಡ ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಸ್ಥಿರವಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 900 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 62,300 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 900 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರತವಾಗಿದ್ದು, ಕೆಜಿ ಬೆಳ್ಳಿ ಬೆಲೆ 62,300 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:
Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Rate: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ದರ ವಿವರ ಪರಿಶೀಲಿಸಿ

 

Published On - 7:29 am, Tue, 28 December 21