Gold and Silver Price Today| ಬೆಂಗಳೂರು: ಆಭರಣಗಳು ಬಹೂಪಯೋಗಿ. ಆದ್ದರಿಂದಲೇ ಚಿನ್ನ, ಬೆಳ್ಳಿ ಕೊಳ್ಳುವುದು ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್ಗೆ ತಕ್ಕವು ಯಾವುದು ಎಂದು ಯೋಚಿಸಿ ಕೊಳ್ಳಲು ಮುಂದಾಗುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 30, ಗುರುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,700 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,900 ರೂಪಾಯಿ ಇಳಿಕೆಯಾಗಿದೆ. ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2000 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,200 ರೂಪಾಯಿ ಇಳಿಕೆಯಾಗಿದೆ. ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 7,900 ರೂಪಾಯಿ ಏರಿಕೆಯಾಗಿದೆ. ಕೆಜಿ ಬೆಳ್ಳಿ ಬೆಲೆ 62,500 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Bengaluru Power Cut: ಬೆಂಗಳೂರಿನ ಬನಶಂಕರಿ, ಯಶವಂತಪುರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್
Karnataka Dams Water Level: ಡ್ಯಾಂಗಳ ನೀರು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Published On - 7:37 am, Thu, 30 December 21