Gold Rate Today: ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ವೀಕೆಂಡ್​ನಲ್ಲಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ

| Updated By: shruti hegde

Updated on: Jul 25, 2021 | 8:59 AM

Gold Price Today: ಇಂದು ಚಿನ್ನದ ದರ ಸ್ಥಿರವಾಗಿ ಉಳಿದಿದ್ದು, ಬೆಳ್ಳಿ ದರ ಕೊಂಚ ಇಳಿಕೆ ಕಂಡು ಬಂದಿದೆ. ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Rate Today: ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ವೀಕೆಂಡ್​ನಲ್ಲಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us on

Gold Silver Price Today | ಬೆಂಗಳೂರು: ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದೆ. ನಿನ್ನೆ ಚಿನ್ನದ ದರದಲ್ಲಿ(Gold Price) ಕೊಂಚ ಏರಿಕೆ ಕಂಡು ಬಂದಿತ್ತು. ಅದಕ್ಕೂ ಮೊದಲು ಎರಡು ದಿನಗಳ ಕಾಲ ಇಳಿಕೆಯ ಹಾದಿ ಹಿಡಿದಿತ್ತು. ಇಂದು ಚಿನ್ನದ ದರ ಸ್ಥಿರವಾಗಿ ಉಳಿದಿದ್ದು, ಬೆಳ್ಳಿ ದರ(Silver Price) ಕೊಂಚ ಇಳಿಕೆ ಕಂಡು ಬಂದಿದೆ. ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಆಭರಣ ಕೊಳ್ಳಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ದರ ಇಳಿಕೆಯತ್ತ ಯಾವಾಗ ಸಾಗುವುದು ಎಂಬುದೇ ಗ್ರಾಹಕರ ಪ್ರಶ್ನೆ. ಆಭರಣಗಳ ದರ ಇಳಿದಾಗ ಚಿನ್ನ ಅಥವಾ ಬೆಳ್ಳಿ ಅಭರಣಗಳನ್ನು ಖರೀದಿಸಬೇಕು ಎಂಬ ಆಸೆ ಹುಟ್ಟುವುದು ಸಹಜ. ಅದೆಷ್ಟೋ ವರ್ಷಗಳಿಂದ ಚಿನ್ನಾಭರಣ ಕೊಳ್ಳಲೆಂದೇ ಹಣವನ್ನು ಕೂಡಿಡುತ್ತಾ ಬಂದಿರುತ್ತೇವೆ. ಅಷ್ಟು ದುಬಾರಿ ವಸ್ತುವನ್ನು ಕೊಳ್ಳಲು ಹೊರಟಾಗ ಒಳ್ಳೆಯ ಗುಣಮಟ್ಟದ ಚಿನ್ನವನ್ನು ಕೊಳ್ಳಬೇಕು ಎಂಬ ಆಸೆ ಇರುವುದು ಸಹಜ. ಒಳ್ಳೆಯ ಅಂಗಡಿಯ ಜತೆಗೆ ಇಂದು ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಗಮನಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,47,000 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,87,700 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಸ್ವಲ್ಪವೇ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 67,050 ರೂಪಾಯಿ ಇದೆ. ಸುಮಾರು 350 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,50,600 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,160 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,91,600 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿದ್ದು, 72,200 ರೂಪಾಯಿಗೆ ಇಳಿಕೆ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,850 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,68,500 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,110 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,11,100 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 67,100 ರೂಪಾಯಿ ಆಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,870 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,68,700 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,870 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,78,700 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 67,100 ರೂಪಾಯಿಗೆ ಇಳಿಕೆ ಆಗಿದೆ.

ಇದನ್ನೂ ಓದಿ:

Gold Rate Today: ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ? ಪರಿಶೀಲಿಸಿ

Gold Rate Today: ಚಿನ್ನದ ದರ ಏರಿಕೆ, ಬೆಳ್ಳಿ ದರ ಇಳಿಕೆ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು? ಮಾಹಿತಿ ಇಲ್ಲಿದೆ