Gold Rate Today: ಚಿನ್ನದ ದರ ಸ್ಥಿರತೆಯಲ್ಲಿದೆ, ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ಯೋಚಿಸಿ

Gold Price Today: ಚಿನ್ನದ ಆಭರಣ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ? ಆಭರಣ ಖರೀದಿಸುವುದೆಂದರೆ ಮಹಿಳೆಯರಿಗೆ ಎಲ್ಲಿಲ್ಲದ ಖುಷಿ.

Gold Rate Today: ಚಿನ್ನದ ದರ ಸ್ಥಿರತೆಯಲ್ಲಿದೆ, ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ಯೋಚಿಸಿ
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on: Jul 26, 2021 | 9:02 AM

Gold Silver Price Today | ಬೆಂಗಳೂರು: ಕಳೆದ ಎರಡು ದಿಗಳಿಂದ ಚಿನ್ನದ ದರ(Gold Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ದೈನಂದಿನ ದರ ಬದಲಾವಣೆಯನ್ನು ಗಮನಿಸುವಾಗ ಆಭರಣಗಳ ಬೆಲೆ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ, ನೀವು ಚಿನ್ನದ ಆಭರಣವನ್ನೋ ಅಥವಾ ಬೆಳ್ಳಿಯ(Silver Price) ಆಭರಣವನ್ನೋ ಖರೀದಿಸುವ ಕುರಿತಾಗಿ ಯೋಚಿಸುತ್ತಿದ್ದರೆ ಇಂದು (ಜುಲೈ 26, ಸೋಮವಾರ) ದರ ವಿವರ ಪರಿಶೀಲಿಸಿ. 

ಚಿನ್ನದ ಆಭರಣ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ? ಆಭರಣ ಖರೀದಿಸುವುದೆಂದರೆ ಮಹಿಳೆಯರಿಗೆ ಎಲ್ಲಿಲ್ಲದ ಖುಷಿ. ಕೇವಲ ಅಲಂಕಾರಕ್ಕೆ ಮಾತ್ರವಲ್ಲ ಹೂಡಿಕೆಯ ದೃಷ್ಟಿಯಿಂದಲೂ ಚಿನ್ನ ಖರೀದಿಸುವ ಪದ್ಧತಿ ಭಾರತದಲ್ಲಿದೆ. ಹಾಗಾಗಿ ಆಭರಣದ ದರ ಎಷ್ಟಿದೆ? ಅಷ್ಟು ವರ್ಷಗಳಿಂದ ಸಂಗ್ರಹಿಸಿದ ಹಣದಲ್ಲಿ ಚಿನ್ನ ಕೊಳ್ಳಲು ಸೂಕ್ತ ಸಮಯವೇ? ಇಂದು ಮಾರುಕಟ್ಟೆಯಲ್ಲಿ ದರ ಇಳಿಕೆ ಕಂಡಿದೆಯೇ? ಹೀಗೆಲ್ಲಾ ಪ್ರಶ್ನೆ ಕಾಡುವುದು ಸಹಜ.

ಚಿನ್ನದ ದರ ವಿವರ ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,700 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,47,000 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,770 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,87,700 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,50,600 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,160 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,91,600 ರೂಪಾಯಿ ಇದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,850 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,68,500 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,110 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,11,100 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,870 ರೂಪಾಯಿ ಹಾಗೂ 100 ಗ್ರಾಮ ಚಿನ್ನದ ದರ 4,68,700 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಹಾಗಾಗಿ ಚಿನ್ನಾಭರಣ ಪ್ರಿಯರು ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಬೆಳ್ಳಿ ದರ ವಿವರ ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 50 ರೂಪಾಯಿ ಏರಿಕೆ ಆಗಿದೆ. ಆ ಬಳಿಕ 67,100 ರೂಪಾಯಿ ನಿಗದಿ ಮಾಡಲಾಗಿದೆ. ಚೆನ್ನೈನಲ್ಲಿ ಚಿನ್ನದ ದರದಲ್ಲಿಯೂ ಏರಿಳಿತ ಕಂಡು ಬಂದಿಲ್ಲ ಅದೇ ರೀತಿ ಬೆಳ್ಳಿ ದರವೂ ಸಹ ಸ್ಥಿರವಾಗಿಯೇ ಉಳಿದಿದೆ. ಕೆಜಿ ಬೆಳ್ಳಿಗೆ 72,000 ರೂಪಾಯಿ ಇದೆ.

ದೆಹಲಿಯಲ್ಲಿ ಕೆಜಿ ಬೆಳ್ಳಿ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ಆ ಬಳಿಕ 67,100 ರೂಪಾಯಿ ನಿಗದಿಯಾಗಿದೆ. ಮುಂಬೈನಲ್ಲಿಯೂ ಸಹ ಅಲ್ಪವೇ ದರ ಏರಿಕೆ ಆಗಿದ್ದು 50 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 67,100 ರೂಪಾಯಿ ಆಗಿದೆ. ಒಟ್ಟಾರೆ ಕೆಲವು ನಗರಗಳಲ್ಲಿ ಚಿನ್ನದ ದರ ಕೊಂಚ ಏರಿಕೆ ಕಂಡಿದ್ದರೆ, ಇನ್ನು ಕೆಲವೆಡೆ ಸ್ಥಿರತೆಯಲ್ಲಿದೆ.

ಇದನ್ನೂ ಓದಿ:

Gold Rate Today: ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ವೀಕೆಂಡ್​ನಲ್ಲಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ

Gold Rate Today: ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ? ಪರಿಶೀಲಿಸಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು