AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಪ್ರೇಯಸಿಗೆ ಆಭರಣ ಕೊಡಿಸುವ ಪ್ಲಾನ್ ಇದೆಯೇ? ಇಂದು ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ ಗಮನಿಸಿ

Gold Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,590 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನಕ್ಕೆ 4,45,900 ರೂಪಾಯಿ ನಿಗದಿಯಾಗಿದೆ.

Gold Rate Today: ಪ್ರೇಯಸಿಗೆ ಆಭರಣ ಕೊಡಿಸುವ ಪ್ಲಾನ್ ಇದೆಯೇ? ಇಂದು ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 28, 2021 | 10:20 AM

Share

Gold silver Rate Today | ಬೆಂಗಳೂರು: ಚಿನ್ನ ಖರೀದಿಸಬೇಕು ಎಂದು ಅದೆಷ್ಟೋ ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತೇವೆ. ಹಾಗಿರುವಾಗ ಚಿನ್ನದ ದರ ಇಳಿಕೆಯತ್ತ ಸಾಗಲಿ ಎಂಬ ಆಸೆ ಇರುವುದು ಸಹಜ. ಇಂದು (ಜುಲೈ 28, ಬುಧವಾರ) ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನಾಭರಣ ಪ್ರಿಯರು ಚಿನ್ನ ಕೊಳ್ಳುವ ಕುರಿತಾಗಿ ಯೋಚಿಸಬಹುದು. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಇಳಿಕೆ ಕಂಡು ಬಂದಿರುವುದು ಆಭರಣ ಪ್ರಿಯರಿಗೆ ಖುಷಿ ಕೊಡುವ ವಿಚಾರ.

ಕಳೆದ ಎರಡು ದಿನಗಳಿಂದ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಅದಕ್ಕೂ ಮೊದಲಿನ ಎರಡು ದಿನಗಳಲ್ಲಿ ಕೊಂಚ ಏರಿಕೆ ಕಂಡಿತ್ತು. ಇಂದು ಇಳಿಕೆಯ ಹಾದಿ ಹಿಡಿದಿರುವುದರಿಂದ ಚಿನ್ನಾಭರಣ ಕೊಳ್ಳುವ ಕುರಿತು ಯೋಚಿಸಬಹುದು. ಮನೆಯವರಿಗೆ ಗಿಫ್ಟ್ ಕೊಡಲು ಪ್ಲಾನ್ ಮಾಡಿದ್ದರೆ, ಮದುವೆ ಸಮಾರಂಭಗಳಿಗಾಗಿ ಚಿನ್ನ ಖರೀದಿಸುವುದಿದ್ದರೆ ಅಥವಾ ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನವನ್ನು ಖರೀದಿಸಬೇಕು ಎಂಬ ಆಸೆ ಇದ್ದರೆ ಇಂದಿನ ದರ ವಿವರ ಗಮನಿಸಿ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳಬಹುದು ಅಂದನಿಸಿದರೆ ಯೋಚಿಸಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,590 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನಕ್ಕೆ 4,45,900 ರೂಪಾಯಿ ನಿಗದಿಯಾಗಿದೆ. ಸರಿಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,650 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,86,500 ರೂಪಾಯಿ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಇಳಿಕೆಯ ಬಳಿಕ 66,400 ರೂಪಾಯಿ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಮ ಚಿನ್ನದ ದರ 45,030 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,300 ರೂಪಾಯಿ ಇದೆ. ಸರಿಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಅಂ ಚಿನ್ನಕ್ಕೆ 49,130 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,91,300 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿನ್ನೆಯ ದರವನ್ನೇ ಕಾಯ್ದಿರಿಸಿಕೊಂಡಿದ್ದು, ಕೆಜಿ ಬೆಳ್ಳಿಗೆ 71,900 ರೂಪಾಯಿ ಇದೆ.

ಮುಂಬೈ, ಹೈದರಾಬಾದ್, ಚೆನ್ನೈ, ಕೇರಳ, ಬೆಂಗಳೂರು ಹೀಗೆ ಎಲ್ಲಾ ಮಹಾ ನಗರಗಳಲ್ಲಿಯೂ ಚಿನ್ನದ ದರ ಇಂದು ಇಳಿಕೆ ಕಂಡಿದೆ. ಕೆಲವೆಡೆ ಸ್ಥಿರತೆಯಲ್ಲಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಕಂಡು ಬಂದಿದೆ. ಕೆಲವೆಡೆ ಬೆಳ್ಳಿ ದರ ಸ್ಥಿರವಾಗಿದೆ. ಕಷ್ಟ ಕಾಲದಲ್ಲಿ ನೆರವಾಗುವ ಆಭರಣಗಳನ್ನು ಖರೀದಿಸುವ ನಿಟ್ಟಿನಲ್ಲಿ ಪ್ರತಿದಿನವೂ ದರ ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ.

ಇದನ್ನೂ ಓದಿ:

Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ! ಆಭರಣ ಕೊಳ್ಳುವ ವಿಚಾರವಿದ್ದರೆ ದರ ವಿವರ ಒಮ್ಮೆ ಗಮನಿಸಿ

Gold Rate Today: ಚಿನ್ನದ ದರ ಸ್ಥಿರತೆಯಲ್ಲಿದೆ, ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ಯೋಚಿಸಿ

Published On - 9:54 am, Wed, 28 July 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್