Gold Price Today: ಇಂದಿನ ಚಿನ್ನ, ಬೆಳ್ಳಿ ದರ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ

Gold Rate Today: ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು ನೀವು ಚಿನ್ನ ಅಥವಾ ಬೆಳ್ಳಿ ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದಿನ ಚಿನ್ನ, ಬೆಳ್ಳಿ ದರ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Nov 11, 2021 | 7:40 AM

Gold and Silver Price Today | ಬೆಂಗಳೂರು: ಚಿನ್ನ, ಬೆಳ್ಳಿಯ ಆಭರಣವನ್ನಾಗಲೀ ಅಥವಾ ಪೂಜಾ ಸಾಮಗ್ರಿಗಳನ್ನಾಗಲೀ ಕೊಳ್ಳುವಾಗ ದರ ಎಷ್ಟಿದೆ ಎಂಬ ಕುತೂಹಲ ಕೆರಳವುದು ಮಾಮೂಲಿ. ಏಕೆಂದರೆ ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು ನೀವು ಚಿನ್ನ (Gold Price) ಅಥವಾ ಬೆಳ್ಳಿ ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Pride) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು ಕೆಜಿ ಬೆಳ್ಳಿಗೆ 64,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,580 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,900 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 69,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿ ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕರೆ 4,93,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 69,300 ರೂಪಾಯಿ ದಾಖಲಾಗಿದೆ. ಇಂದು ಸುಮಾರು 200 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,600 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,600 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 64,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಆಗಿದೆ.

ಇದನ್ನೂ ಓದಿ:

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Gold Price Today: ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:29 am, Thu, 11 November 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ