AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಆಭರಣ ಖರೀದಿಸುತ್ತೀರಾ? ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Rate Today: ಅಷ್ಟೊಂದು ದುಡ್ಡು ಕೊಟ್ಟು ಕೊಳ್ಳುತ್ತಿರುವ ಚಿನ್ನಾಭರಣದ ದರ ಇಳಿಕೆಯತ್ತ ಸಾಗಿದ್ದಾಗಲೇ ಖರೀದಿಸೋಣ ಎಂಬ ಆಸೆ ತಪ್ಪೇನಲ್ಲ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಆಭರಣ ಖರೀದಿಸುತ್ತೀರಾ? ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಸಂಗ್ರಹ ಚಿತ್ರ
shruti hegde
|

Updated on:Nov 16, 2021 | 7:40 AM

Share

Gold and Silver Price Today | ಬೆಂಗಳೂರು: ಚಿನ್ನ ಖರೀದಿಸಬೇಕು ಎಂದು ಅದೆಷ್ಟೋ ದಿನಗಳಿಂದ ಯೋಚಿಸುತ್ತಿರಬಹುದು. ಆದರೆ ಚಿನ್ನದ ದರದಲ್ಲಿ ಕೊಂಚವಾದರೂ ಇಳಿಕೆ ಆಗಲಿ ಎಂಬ ಆಸೆ ಇದ್ದೇ ಇರುತ್ತದೆ. ಹಲವು ದಿನಗಳಿಂದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಏರಿಕೆ ಕಂಡಿತ್ತು. ಆ ಬಳಿಕ ಇಂದು ಮಂಗಳವಾರ (ನವೆಂಬರ್ 16) ಚಿನ್ನ, ಬೆಳ್ಳಿ ದರದಲ್ಲಿ (Silver Price) ಇಳಿಕೆ ಆಗಿದೆ. ಇದು ಗ್ರಾಹಕರಿಗೆ ಕೊಂಚ ಸಮಾಧಾನ ತರುವ ವಿಚಾರ. ಅಷ್ಟೊಂದು ದುಡ್ಡು ಕೊಟ್ಟು ಕೊಳ್ಳುತ್ತಿರುವ ಚಿನ್ನಾಭರಣದ ದರ ಇಳಿಕೆಯತ್ತ ಸಾಗಿದ್ದಾಗಲೇ ಖರೀದಿಸೋಣ ಎಂಬ ಆಸೆ ತಪ್ಪೇನಲ್ಲ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ಸುಮಾರು 1,200 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 66,400 ರೂಪಾಯಿ ನಿಗದಿಯಾಗಿದೆ. ಸುಮಾರು 800 ರೂಪಾಯಿ ಇಳಿಕೆ ಆಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,520 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,200 ರೂಪಾಯಿ ನಿಗದಿಯಾಗಿದೆ. ಸುಮಾರು 2,700 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಇಳಿಕೆ ಬಳಿಕ, 71,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,300 ರೂಪಾಯಿ ನಿಗದಿಯಾಗಿದೆ. ಸುಮಾರು 3,600 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂಪಾಯಿ ನಿಗದಿಯಾಗಿದೆ. ಸುಮಾರು 3,600 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 66,400 ರೂಪಾಯಿ ದಾಖಲಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,100 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 71,000 ರೂಪಾಯಿ ನಿಗದಿಯಾಗಿದೆ. ಸುಮಾರು 700 ರೂಪಾಯಿಯಷ್ಟು ಇಳಿಕೆ ಆಗಿದೆ.

ಇದನ್ನೂ ಓದಿ:

Gold Price Today: ಏರುತ್ತಲೇ ಇದೆ ಆಭರಣಗಳ ಬೆಲೆ; ಇಂದು ಸಹ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Published On - 7:23 am, Tue, 16 November 21

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ