Gold Price Today: ಇಂದು ಹಲವೆಡೆ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ನೀವು ಚಿನ್ನಾಭರಣ ಕೊಳ್ಳುವುದಾದರೆ ದರ ವಿವರ ಗಮನಿಸಿ

Gold Rate Today: ನೀವು ಅಂದುಕೊಂಡ ಚಿನ್ನದ ಬಳೆಗಳು, ಉಂಗುರ ಅಥವಾ ಸರ ಕೊಳ್ಳಲು ಹಣ ಸರಿ ಹೊಂದುವುದಾದರೆ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಿ. ಅದಕ್ಕೂ ಮುಂಚಿತವಾಗಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದು ಹಲವೆಡೆ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ನೀವು ಚಿನ್ನಾಭರಣ ಕೊಳ್ಳುವುದಾದರೆ ದರ ವಿವರ ಗಮನಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Nov 18, 2021 | 8:03 AM

Gold and Silver Price Today | ಬೆಂಗಳೂರು: ಚಿನ್ನ ಖರೀದಿಸಬೇಕು ಎಂದು ಅದೆಷ್ಟೋ ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತೀರಿ. ನೀವು ಚಿನ್ನಾಭರಣ ಕೊಳ್ಳುವ ಸಂದರ್ಭದಲ್ಲಿ ಚಿನ್ನ (Gold Price), ಬೆಳ್ಳಿ ದರ ಸ್ವಲ್ಪ ಇಳಿಕೆ ಆಗಿರಲಿ ಎಂಬ ಆಸೆ ತಪ್ಪೇನಲ್ಲ. ಅದರಲ್ಲಿಯೂ ಮನೆಯಲ್ಲಿ ಮಗಳ ಅಥವಾ ಮಗನ ಮದುವೆಯ ವಿಶೇಷ ಸಮಾರಂಭಗಳಿದ್ದಾಗ ಮನೆಯಲ್ಲಿ ಚಿನ್ನ ತರುವುದು ಸಾಮಾನ್ಯ. ಹಾಗಿರುವಾಗ ನೀವು ಅಂದುಕೊಂಡ ಚಿನ್ನದ ಬಳೆಗಳು, ಉಂಗುರ ಅಥವಾ ಸರ ಕೊಳ್ಳಲು ಹಣ ಸರಿ ಹೊಂದುವುದಾದರೆ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಿ. ಅದಕ್ಕೂ ಮುಂಚಿತವಾಗಿ ಇಂದು ಗುರುವಾರ (ನವೆಂಬರ್ 18) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 66,400 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,500 ರೂಪಾಯಿ ನಿಗದಿಯಾಗಿದೆ. ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ಇಳಿಕೆ ಆಗಿದ್ದು 71,000 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ಸುಮಾರು 2,800 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೈಪಾಯಿ ಇಳಿಕೆ ಬಳಿಕ 71,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ ಮುಂಬೈನಲ್ಲಿ ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ ಆಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,84,700 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, 66,400 ರೂಪಾಯಿ ನಿಗದಿಯಾಗಿದೆ. ಇಂದು ಸುಮಾರು 400 ರೂಪಾಯಿಯಷ್ಟು ಇಳಿಕೆ ಆಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Published On - 7:50 am, Thu, 18 November 21

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ