Gold and Silver Price Today | ಬೆಂಗಳೂರು: ಮನೆಯಲ್ಲಿ ವಿಷೇಶ ಪೂಜೆ ಪುನಸ್ಕಾರಗಳು, ಮದುವೆ ಸಮಾರಂಭ ಹೀಗೆ ಸಂತೋಷದ ದಿನಗಳು ಬಂದಾಗ ಮನೆಯಲ್ಲಿ ಚಿನ್ನಾಭರಣ ಖರೀಸುವುದು ಸಾಮಾನ್ಯ. ಕೇವಲ ಮಹಿಳೆಯರು ಅಲಂಕಾರಗೊಳ್ಳುಲು ಮಾತ್ರವಲ್ಲ ದೇವರ ಪೂಜೆಗೆಂದೂ ಸಹ ಚಿನ್ನ ಖರೀದಿಸುವುದುಂಟು. ಜೊತೆಗೆ ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವುದುಂಟು, ಹೀಗಿರುವಾಗ ಚಿನ್ನದ ದರ (Gold Price) ಎಷ್ಟಿರಬಹುದು? ಎಂಬುದು ಪ್ರತಿನಿತ್ಯ ಕುತೂಹಲ ಮೂಡಿಸುವ ಪ್ರಶ್ನೆ. ಇಂದು ಶುಕ್ರವಾರ (ನವೆಂಬರ್ 19) ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,400 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ 71,400 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ 71,400 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,100 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,81,00 ರೂಪಾಯಿ ನಿಗದಿಯಾಗಿದೆ. ಸುಮಾರು 3,700 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ಸುಮಾರು 3,700 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿಯೂ ಸಹ ಇಳಿಕೆ ಆಗಿದ್ದು, 100 ರೂಪಾಯಿ ಇಳಿಕೆ ಬಳಿಕ 66,300 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ
Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ