Gold Price Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸ್ಥಿರ; ದರ ವಿವರ ಇಲ್ಲಿದೆ ಪರಿಶೀಲಿಸಿ

Gold Rate Today: ಚಿನ್ನಾಭರಣ ಕೊಳ್ಳುವ ಸಮಯದಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಜೊತೆಗೆ ಆಭರಣಗಳ ದರ ಇಳಿಕೆಯತ್ತ ಸಾಗಿದ್ದಾಗಲೇ ಚಿನ್ನ, ಬೆಳ್ಳಿ ಖರೀದಿಸೋಣ ಅಂದುಕೊಳ್ಳುವುದೂ ತಪ್ಪಲ್ಲ. ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ. ಈ ಕೆಳಗಿನಂತಿದೆ ಇಂದಿನ ಚಿನ್ನ, ಬೆಳ್ಳಿ ದರ ವಿವರ.

Gold Price Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸ್ಥಿರ; ದರ ವಿವರ ಇಲ್ಲಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Updated By: shruti hegde

Updated on: Nov 23, 2021 | 7:41 AM

ಬೆಂಗಳೂರು: ಕಳೆದ ಎರಡು ದಿಗಳಿಂದ ಚಿನ್ನದ ದರದಲ್ಲಿ ಇಳಿಕೆ ಆಗಿತ್ತು. ಬೆಳ್ಳಿ ದರ ಇಳಿಕೆ ಬಳಿಕ ನಿನ್ನೆ ಸ್ಥಿರತೆ ಕಾಯ್ದುಕೊಂಡಿತ್ತು. ಆ ಬಳಿಕ ಇಂದು ಮಂಗಳವಾರ (ನವೆಂಬರ್ 23) ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಸ್ಥಿರವಾಗಿದೆ. ಚಿನ್ನಾಭರಣ ಕೊಳ್ಳುವ ಸಮಯದಲ್ಲಿ ಚಿನ್ನದ ದರ (Gold Price) ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಜೊತೆಗೆ ಆಭರಣಗಳ ದರ ಇಳಿಕೆಯತ್ತ ಸಾಗಿದ್ದಾಗಲೇ ಚಿನ್ನ, ಬೆಳ್ಳಿ ಖರೀದಿಸೋಣ ಅಂದುಕೊಳ್ಳುವುದೂ ತಪ್ಪಲ್ಲ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ (Silver Price) ಏರಿಳಿತ ಕಾಣುತ್ತಿರುವುದು ಸರ್ವೇಸಾಮಾನ್ಯ. ಹಾಗಾಗಿ ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ. ಈ ಕೆಳಗಿನಂತಿದೆ ಇಂದಿನ ಚಿನ್ನ, ಬೆಳ್ಳಿ ದರ ವಿವರ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bengaluru Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರವೂ ಸ್ಥಿರತೆ ಕಾಯ್ದುಕೊಂಡಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿ ಇಳಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,02,400 ರೂಪಾಯಿ ನಿಗದಿಯಾಗಿದೆ. ಸುಮಾರು 1,700 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 70,400 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ ,ಬೆಳ್ಳಿ ದರ (Hyderabad gold price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 70,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,280 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,280 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ

Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​​; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Published On - 7:37 am, Tue, 23 November 21