ಬೆಂಗಳೂರು: ಗ್ರಾಹಕರಿಗೆ ಸಮಾಧಾನ ತರುವ ವಿಷಯವೆಂದರೆ ಇಂದು ಬುಧವಾರ (ನವೆಂಬರ್ 24) ಚಿನ್ನ, ಬೆಳ್ಳಿ ದರ (Gold Silver Price) ಇಳಿಕೆ ಆಗಿದೆ. ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡು ಹಣವನ್ನು ಕೂಡಿಟ್ಟಿದ್ದರೆ, ನೀವು ಅಂದುಕೊಂಡ ಚಿನ್ನ ಖರೀಸಿದಿಸಲು ಬೆಲೆ ಹೊಂದುವುದಾದರೆ ಆ ಕುರಿತಾಗಿ ಯೋಚಿಸಬಹುದು. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ (Gold Price), ಬೆಳ್ಳಿ ದರ ಇಳಿಕೆ ಆಗಿದೆ. ಹಾಗಿರುವಾಗ 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಚಿನ್ನ ಖರೀದಿಸಲು ಸುಸಮಯ ಅನಿಸಿದರೆ ಆ ಕುರಿತಾಗಿ ಯೋಚಿಸಿ.
ಮನೆಯಲ್ಲಿ ಮದುವೆ ಸಮಾರಂಭ ಎದುರಿಗಿದ್ದಾಗ ಚಿನ್ನಾಭರಣ ಖರೀದಿಸಬೇಕು ಅನಿಸುತ್ತದೆ. ಕೇವಲ ಅಲಂಕಾರ ಮಾಡಿಕೊಳ್ಳಲು ಮಾತ್ರವಲ್ಲದೇ ಶುಭ ದಿನದಂದು ಚಿನ್ನ ಖರೀದಿಸದರೆ ಒಳ್ಳೆಯದು ಎಂಬ ನಂಬಿಕೆ ಇದೆ. ಹಾಗಾಗಿ ಅಷ್ಟು ದೊಡ್ಡ ಮೌಲ್ಯದ ಚಿನ್ನಾಭರಣ ಖರೀದಿಸುವಾಗ ದರ ಕೊಂಚ ಮಟ್ಟಿಗಾದರೂ ಇಳಿಕೆ ಆಗಿರಲಿ ಎಂಬ ನಿರೀಕ್ಷೆ ತಪ್ಪೇನಲ್ಲ. ಹಾಗಿರುವಾಗ ಇಂದು ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ ಆಗಿದೆ. ನೀವು ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಿದ್ದರೆ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bengaluru Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,050 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,50,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,900 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 7,500 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 64,000 ರೂಪಾಯಿ ನಿಗದಿಯಾಗಿದೆ. ಸುಮಾರು 1,600 ರೂಪಾಯಿ ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 7,100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 49,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,600 ರೂಪಾಯಿ ನಿಗದಿಯಾಗಿದೆ. ಸುಮಾರು, 7,800 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 900 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 69,500 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai gold price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 12,900 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ನಿಗದಿಯಾಗಿದೆ. ಸುಮಾರು 12,900 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 1,600 ರೂಪಾಯಿ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 64,000 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ
Published On - 7:51 am, Wed, 24 November 21