Gold Price Today: ಗ್ರಾಹಕರೇ ಗಮನಿಸಿ; ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
Gold Rate Today: ಇಂದು ಸಹ ಆಭರಣಗಳ ಬೆಲೆ ಇಳಿಕೆ ಆಗಿದೆ. ಇದು ಗ್ರಾಹಕರಿಗೆ ಖುಷಿ ನೀಡುವ ವಿಚಾರ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ.
ಬೆಂಗಳೂರು: ಚಿನ್ನ ಖರೀದಿಸುವಾಗ ದರ ಸ್ವಲ್ಪ ಮಟ್ಟಿಗಾದರೂ ಇಳಿಕೆ ಆಗಿರಲಿ ಎಂಬ ಆಸೆ ಇರುವುದು ತಪ್ಪಲ್ಲ. ಅಷ್ಟೊಂದು ಹಣ ಕೊಟ್ಟು ಚಿನ್ನ, ಬೆಳ್ಳಿ ಖರೀದಿಗೆ ಮುಂದಾಗಿರುವಾಗ ದರ ಇಳಿಕೆಯತ್ತ ಸಾಗಿದ್ದರೆ ಸಮಾಧಾನದ ವಿಷಯ. ನೀವು ಅದೆಷ್ಟೋ ವರ್ಷಗಳಿಂದ ಚಿನ್ನ ಖರೀದಿಸಬೇಕು ಅಂದುಕೊಂಡು ಹಣವನ್ನು ಕೂಡಿಡುತ್ತಾ ಬಂದಿರುತ್ತೀರಿ. ಮನೆಯಲ್ಲಿ ಮದುವೆ ಸಮಾರಂಭಗಳು ಎದುರಿಗಿದ್ದಾಗ ಚಿನ್ನ ಖರೀದಿಸುವ ಆಸೆ ಇರುತ್ತದೆ. ಹಾಗಿರುವಾಗ ಇಂದು ಗುರುವಾರ (ನವೆಂಬರ್ 25) ಚಿನ್ನ (Gold price), ಬೆಳ್ಳಿಗೆ ಎಷ್ಟಿದೆ ಬೆಲೆ? ಎಂಬ ಮಾಹಿತಿ ತಿಳಿಯಿರಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ. ನಿನ್ನೆ ಕೂಡಾ ಚಿನ್ನ, ಬೆಳ್ಳಿ ದರದಲ್ಲಿ (Silver Price) ಇಳಿಕೆ ಆಗಿತ್ತು. ಅದೇ ರೀತಿ ಇಂದು ಸಹ ಆಭರಣಗಳ ಬೆಲೆ ಇಳಿಕೆ ಆಗಿದೆ. ಇದು ಗ್ರಾಹಕರಿಗೆ ಖುಷಿ ನೀಡುವ ವಿಚಾರ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಇಂದು ಎಷ್ಟು ಇಳಿಕೆ ಆಗಿದೆ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,900 ಇಳಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, 1,300 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 62,700 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,400 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,090 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,90,900 ರೂಪಾಯಿ ದಾಖಲಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,700 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು ಕೆಜಿ ಬೆಳ್ಳಿಗೆ 67,600 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿ ಇಳಿಕೆ ಆಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಸುಮಾರು 3,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ಸುಮಾರು 3,900 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,900 ರೂಪಾಯಿಯಷ್ಟು ಇಳಿಕೆ ಆಗಿದೆ.
ಇದನ್ನೂ ಓದಿ:
Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
Gold Price Today: ಚಿನ್ನಾಭರಣ ಪ್ರಿಯರಿಗೆ ಸಂತೋಷದ ಸುದ್ದಿ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
Published On - 7:51 am, Thu, 25 November 21