ಬೆಂಗಳೂರು: ಚಿನ್ನ ಖರೀದಿಸಬೇಕೆಂದು ಅದೆಷ್ಟೋ ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತೀರಿ. ದರ ಏರಿಕೆಯತ್ತ ಸಾಗಿದೆ ಅಂದಾದಾಗ ಚಿನ್ನ, ಖರೀದಿಸಬೇಕು ಎಂಬುದಕ್ಕೆ ಹಿಂದೇಟು ಹಾಕುತ್ತೇವೆ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನದ ದರ ಏರಿಳಿತ ಕಾಣುತ್ತಿರುವುದು ಸಹಜ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ನೀವು ಖರೀದಿಸಬೇಕು ಅಂದುಕೊಂಡ ಚಿನ್ನ (Gold price) ಕೊಳ್ಳಲು ಸರಿ ಹೊಂದುವುದಾದರೆ ಆ ಕುರಿತಾಗಿ ಯೋಚಿಸಿ. ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ? ಇಂದು ಎಷ್ಟು ಏರಿಕೆ ಆಗಿದೆ. ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,500 ರೂಪಅಯಿ ನಿಗದಿಯಾಗಿದೆ. ಸುಮಾರು 2,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 62,200 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಮಾಹಿತಿ
ಚೆನ್ನೈನಲ್ಲಿ ಇಂದು ಚಿನ್ನದ ದರದಲ್ಲಿ ಇಳಿಕೆ ಆಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,500 ರೂಪಾಯಿ ನಿಗದಿಯಾಗಿದೆ. ಸುಮಾರು 2,100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ. ಸುಮಾರು 700 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,400 ರೂಪಾಯಿ ನಿಗದಿಯಾಗಿದೆ. ಸುಮಾರು 1,800 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,350 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,93,500 ರೂಪಾಯಿ ದಾಖಲಾಗಿದೆ. ಸುಮಾರು 2,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ