ಬೆಂಗಳೂರು: ಚಿನ್ನ, ಬೆಳ್ಳಿ ಖರೀದಿಸಬೇಕು ಅಂದಿದ್ದಾಗ ದರ ಎಷ್ಟಿರಬಹುದು ಎಂಬ ಕುತೂಹಲ ಕೆರಳುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಮನೆಯಯಲ್ಲಿ ಮದುವೆ ಸಮಾರಂಭಗಳಿದ್ದಾಗ ಚಿನ್ನ ಖರೀದಿಸುವ ಪ್ಲ್ಯಾನ್ ಮಾಡಿರುತ್ತೀರಿ. ಬೆಲೆ ಕೊಂಚ ಇಳಿಕೆಯತ್ತ ಸಾಗಿದ್ದಾಗ ಚಿನ್ನ (Gold Price), ಬೆಳ್ಳಿ ಸಾಮಗ್ರಿಗಳನ್ನು ಅಥವಾ ಆಭರಣಗಳನ್ನು ಖರೀದಿಸೋಣ ಅಂದುಕೊಳ್ಳುವುದು ತಪ್ಪೇನಲ್ಲ. ಹೀಗಿರುವಾಗ ಇಂದು ಸೋಮವಾರ (ನವೆಂಬರ್ 29) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,400 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 67, 200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿ ಇಳಿಕೆ ಕಂಡು ಬಂದಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ
ಮುಂಬೈನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಚಿನ್ನದ ದರ ಏರಿಕೆ ಆಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Published On - 8:07 am, Mon, 29 November 21