AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ದೀಪಾವಳಿಗೆ ಚಿನ್ನ ಖರೀದಿಸುವ ಪ್ಲ್ಯಾನ್ ಇದೆಯೇ? ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ ಗಮನಿಸಿ

Gold Rate Today: ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ದರ ಎಷ್ಟಾಗಿದೆ? ದೈನಂದಿನ ದರ ಬದಲಾವಣೆಯಲ್ಲಿ ಎಷ್ಟು ಏರಿಳಿವಾಗಿದೆ ಎಂಬುದನ್ನು ತಿಳಿಯಿರಿ. ಆ ನಂತರ ಆಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Price Today: ದೀಪಾವಳಿಗೆ ಚಿನ್ನ ಖರೀದಿಸುವ ಪ್ಲ್ಯಾನ್ ಇದೆಯೇ? ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ ಗಮನಿಸಿ
ಚಿನ್ನಾಭರಣ
TV9 Web
| Edited By: |

Updated on:Nov 03, 2021 | 7:36 AM

Share

Gold and Silver Price Today | ಬೆಂಗಳೂರು: ಇಂದು ಪ್ರಮುಖ ನಗರಗಳಲ್ಲಿ ಚಿನ್ನದ ದರ (Gold price) ಕೊಂಚ ಏರಿಕೆ ಆಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರವಾಗಿತ್ತು. ಆ ಬಳಿಕ ಇಂದು ( ನವೆಂಬರ್ 3, ಬುಧವಾರ) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ (Silver Price) ಖರೀದಿಸಬೇಕು ಅಂದುಕೊಂಡಿದ್ದರೆ ಎಷ್ಟಿದೆ ಇಂದಿನ ರೇಟ್ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ.

ಹಬ್ಬ ಅಂದರೆ ಶುಭ ಸಂದರ್ಭ. ಶುಭ ದಿನದಂದು ಚಿನ್ನ ಕೊಳ್ಳುವುದು ಒಳ್ಳೆಯದು ಜೊತೆಗೆ ಸಂತೋಷವನ್ನು ತಂದುಕೊಡುತ್ತದೆ. ಅಷ್ಟೊಂದು ದೊಡ್ಡ ಮೌಲ್ಯದ ಆಭರಣ ಖರೀಸುವಾಗ ಒಳ್ಳೆಯ ದಿನದಂದು ಚಿನ್ನ, ಬೆಳ್ಳಿಯ ಆಭರಣ ಕೊಳ್ಳುವುದು ಉತ್ತಮ. ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ದರ ಎಷ್ಟಾಗಿದೆ? ದೈನಂದಿನ ದರ ಬದಲಾವಣೆಯಲ್ಲಿ ಎಷ್ಟು ಏರಿಳಿವಾಗಿದೆ ಎಂಬುದನ್ನು ತಿಳಿಯಿರಿ. ಆ ನಂತರ ಆಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಬೆಂಗಳೂರಿನಲ್ಲಿ ಚಿನ್ನದ ದರ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 100 ಗ್ರಾಂ ಚಿನ್ನಕ್ಕೆ 4,48,000 ರೂಪಾಯಿ ನಿಗದಿಯಾಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,700 ರೂಪಾಯಿ ದಾಖಲಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಆಗಿದೆ. ಇನ್ನು ಬೆಳ್ಳಿ ದರವೂ ಕೊಂಚ ಏರಿಕೆ ಆಗಿದ್ದು, 300 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿಗೆ 64,700 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,800 ರೂಪಾಯಿ ನಿಗದಿಯಾಗಿದೆ. ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 68,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 64,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ

Published On - 7:24 am, Wed, 3 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ