Gold Price Today: ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Gold Rate Today: ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಾಗ ದರ ಎಷ್ಟಿದೆ? ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಹೀಗಿರುವಾಗ ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ; ಬೆಳ್ಳಿ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
Edited By:

Updated on: Nov 30, 2021 | 8:04 AM

ಬೆಂಗಳೂರು: ಚಿನ್ನ ಖರೀದಿಸಬೇಕು ಅಂದುಕೊಂಡಿದ್ದಾಗ ಬೆಲೆ ಕೊಂಚ ಪ್ರಮಾಣದಲ್ಲಿಯಾದರೂ ಇಳಿಕೆ ಕಾಣಬೇಕು ಅಂದುಕೊಳ್ಳುವುದು ತಪ್ಪೇನಲ್ಲ. ಅಷ್ಟು ದುಡ್ಡು ಕೊಟ್ಟು ಚಿನ್ನಾಭರಣ ಖರೀದಿಸಲು ಹೊರಟಾಗ ಇಂದಿನ ದರ ಎಷ್ಟಿದೆ? ಎಂಬ ಕುತೂಹಲ ಕೆರಳುವುದು ಸರ್ವೇ ಸಾಮಾನ್ಯ. ಮನೆಯಲ್ಲಿ ಮದುವೆ ಸಮಾರಂಭಗಳು ಎದುರಿಗಿದ್ದಾಗ ಚಿನ್ನ (Gold Price), ಬೆಳ್ಳಿ (Silver Price) ಸಾಮಗ್ರಿಗಳನ್ನು ಮತ್ತು ಅಭರಣಗಳನ್ನು ಖರೀದಿಸುವ ಪ್ಲ್ಯಾನ್ ಮಾಡಿದ್ದರೆ ಇಂದು ಮಂಗಳವಾರ (ನವೆಂಬರ್ 30) ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 900 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 62,700 ರೂಪಾಯಿ ದಾಖಲಾಗಿದೆ. ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ನಿಗದಿಯಾಗಿದೆ. ಸುಮಾರು 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,505 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,050 ರೂಪಾಯಿ ನಿಗದಿಯಾಗಿದೆ. ಸುಮಾರು 1,650 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 67,600 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,09,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 67,600 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,100 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,100 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 62,700 ರೂಪಾಯಿ ನಿಗದಿಯಾಗಿದೆ. ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ