Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Rate Today: ಹಬ್ಬದ ನಂತರ ಚಿನ್ನದ ದರದಲ್ಲಿ ಏರಿಕೆಯಾಗಿದೆ. ದೇಶದ ಬಹುತೇಕ ನಗರಗಳಲ್ಲಿ ಬೆಲೆ ಏರಿಕೆಯಾಗಿದ್ದು, ಮುಂಬೈನಲ್ಲಿ ಮಾತ್ರ ಚಿನ್ನದ ಬೆಲೆ ಇಳಿದಿದೆ. ಚಿನ್ನ ಹಾಗೂ ಬೆಳ್ಳಿಗೆ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
ಚಿನ್ನ (ಸಾಂದರ್ಭಿಕ ಚಿತ್ರ)
Edited By:

Updated on: Nov 06, 2021 | 8:10 AM

Gold and Silver Price Today | ಬೆಂಗಳೂರು: ಇಂದು ಶನಿವಾರ (ನವೆಂಬರ್ 6) ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ (Silver Price) ಏರಿಕೆ ಕಂಡಿದೆ. ಆದರೆ ಮುಂಬೈನಲ್ಲಿ ಮಾತ್ರ ಚಿನ್ನದ ಬೆಲೆ ಇಳಿಕೆ ಕಂಡಿದೆ. ಹಬ್ಬದ ನಂತರ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿಕೆ ಕಂಡುಬಂದಿದೆ. ದೇಶದ ಯಾವ್ಯಾವ ನಗರಗಳಲ್ಲಿ ಎಷ್ಟೆಷ್ಟು ದರವಿದೆ ಹಾಗೂ ಎಷ್ಟು ದರ ಏರಿಕೆ- ಇಳಿಕೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price Today)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,000 ರೂಪಾಯಿ ನಿಗದಿಯಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಬೆಳ್ಳಿ ದರದಲ್ಲೂ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,300 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,800 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 39,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,400 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದ್ದು ಕೆಜಿ ಬೆಳ್ಳಿ ಬೆಲೆ 68,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, 64,300 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

ಕ್ಯಾಬ್ ಡ್ರೈವರ್​ಗಳಲ್ಲಿ ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಅವರ ಜೀವನಶೈಲಿ ಕಾರಣ: ಡಾ ರಾಹುಲ ಪಾಟೀಲ್

Ginger Tea: ಪ್ರತಿದಿನ ಶುಂಠಿ ಚಹಾ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ?