Gold and Silver Price Today | ಬೆಂಗಳೂರು: ನಿನ್ನೆ ಸಹ ಚಿನ್ನದ ದರ ಏರಿಕೆ ಕಂಡಿತ್ತು. ಆ ಬಳಿಕ ಇಂದು ಭಾನುವಾರ (ನವೆಂಬರ್ 7)ರಂದು ಚಿನ್ನದ ದರದಲ್ಲಿ (Gold Price) ಕೊಂಚ ಏರಿಕೆ ಆಗಿದೆ. ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಏರಿಕೆ ಆಗಿದೆ. ನೀವು ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಿದ್ದರೆ ಆ ಕುರಿತಂತೆ ಯೋಚಿಸಿ. ಇಂದು ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ನಿಗದಿಯಾಗಿದೆ. ಸುಮಾರು 440 ರೂಪಾಯಿಯಷ್ಟು ಏರಿಕೆ ಕಂಡಿದೆ. 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,400 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿಯೂ ಸಹ ಏರಿಕೆ ಆಗಿದ್ದು ಕೆಜಿ ಬೆಳ್ಳಿಗೆ 64,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,410 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,600 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,540 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಆಗಿದ್ದು ಕೆಜಿ ಬೆಳ್ಳಿಗೆ 68,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,400 ರೂಪಾಯಿ ನಿಗದಿಯಾಗಿದೆ. ಕೆಜಿ ಬೆಳ್ಳಿ ಬೆಲೆ 68,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಏರಿಕೆ ಆಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೆಜಿ ಬೆಳ್ಳಿ ಬೆಲೆಯಲ್ಲಿ 100 ರೂಪಾಯಿ ಏರಿಕೆ ಬಳಿಕ 64,400 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ ದರ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?
Published On - 7:19 am, Sun, 7 November 21