AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ವೀಕೆಂಡ್​ನಲ್ಲಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ

Gold Rate Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ? ಇಂದಿನ ದರದಲ್ಲಿ ಚಿನ್ನ ಕೊಳ್ಳುವುದು ಸೂಕ್ತ ಅನಿಸುವುದೇ? ಈ ಕುರಿತಾದ ಕೆಲವೊಂದಿಷ್ಟು ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬಹುದು ಎಂದೆನಿಸಿದರೆ ಯೋಚಿಸಿ.

Gold Price Today: ವೀಕೆಂಡ್​ನಲ್ಲಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 10, 2021 | 7:57 AM

Share

Gold and Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿ ಚಿನ್ನದ ದರ ಕೊಂಚ ಏರಿಕೆ ಕಂಡು ಬಂದಿದ್ದರೆ, ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಇಂದು ಬೆಂಗಳೂರಿನಲ್ಲಿ ಚಿನ್ನದ ದರ (Gold Price) ಸ್ಥಿರವಾಗಿದೆ. ಬೆಳ್ಳಿ ದರದಲ್ಲಿ (Silver Price) ಏರಿಕೆ ಕಂಡು ಬಂದಿದೆ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ? ಇಂದಿನ ದರದಲ್ಲಿ ಚಿನ್ನ ಕೊಳ್ಳುವುದು ಸೂಕ್ತ ಅನಿಸುವುದೇ? ಈ ಕುರಿತಾದ ಕೆಲವೊಂದಿಷ್ಟು ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬಹುದು ಎಂದೆನಿಸಿದರೆ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,39,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,78,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,700 ರೂಪಾಯಿ ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,380 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,43,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,410 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,84,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,700 ರೂಪಾಯಿ ಏರಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 65,900 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಮುಂಬೈನಲ್ಲಿ ಇಂದು ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 61,800 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಬೆಂಗಳೂರು, ಚೆನ್ನೈ, ಮುಂಬೈ ಸೇರಿದಂತೆ ಹೈದರಾಬಾದ್, ಜೈಪುರ, ಕೇರಳ ಹೀಗೆ ಕೆಲವೆಡೆ ಇಂದು ಚಿನ್ನದ ದರ ಸ್ಥಿರವಾಗಿದ್ದರೆ, ಇನ್ನು ಕೆಲವೆಡೆ ಕೊಂಚ ಏರಿಕೆ ಕಂಡು ಬಂದಿದೆ. ಆದರೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಬೆಳ್ಳಿ ದರ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನ, ಬೆಳ್ಳಿ ದರ ಕೊಂಚ ಏರಿಕೆಯಾಗುತ್ತಿರುವುದು ಕಂಡು ಬಂದಿದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಕೆ ಮತ್ತು ಇಳಿಕೆ ಕಾಣುತ್ತಿರುವುದು ಸರ್ವೇ ಸಾಮಾನ್ಯ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.

ಇದನ್ನೂ ಓದಿ:

Gold Price Today: ಇಂದು ಚಿನ್ನದ ದರದಲ್ಲಿ ಇಳಿಕೆ; ಚಂದದ ಕಿವಿಯೋಲೆ ಖರೀದಿಸುವ ಆಸೆ ಇದ್ದರೆ ಆಭರಣದ ಬೆಲೆ ಎಷ್ಟಿದೆ ಗಮನಿಸಿ

Gold Price Today: ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ

Published On - 7:42 am, Sun, 10 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ