AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಯೋಚಿಸಿದ್ದರೆ ಇಂದಿನ ದರ ವಿವರ ಪರಿಶೀಲಿಸಿ

Gold Rate Today: ನೀವು ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ಖರೀದಿಸಬೇಕು ಅಂದುಕೊಂಡಿದ್ದರೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಯೋಚಿಸಿದ್ದರೆ ಇಂದಿನ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 11, 2021 | 7:29 AM

Share

Gold and Silver Price Today | ಬೆಂಗಳೂರು: ನಿನ್ನೆ ಕೆಲವೆಡೆ ಚಿನ್ನದ ದರ ಸ್ಥಿರವಾಗಿದ್ದರೆ, ಇನ್ನು ಕೆಲವೆಡೆ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಬೆಳ್ಳಿ ದರದಲ್ಲಿ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕೊಂಚ ಏರಿಕೆ ಆಗಿತ್ತು. ಆ ಬಳಿಕ ಇಂದು (ಅಕ್ಟೋಬರ್ 11, ಸೋಮವಾರ) ಚಿನ್ನದ ದರ (Gold Price) ಕೆಲವೆಡೆ ಸ್ಥಿರವಾಗಿಯೇ ಇದೆ. ಬೆಳ್ಳಿ ದರದಲ್ಲಿ (Silver Price) ಇಂದು ಇಳಿಕೆ ಕಂಡು ಬಂದಿದೆ. ಚಿನ್ನ, ಬೆಳ್ಳಿ ಖರೀದಿಸುವ ಆಸೆ ಇದ್ದರೆ ಬೆಲೆ ಎಷ್ಟಿದೆ ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,39,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,200 ರೂಪಾಯಿ ಇಳಿಕೆ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,420 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,84,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 65,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

ಹೈದರಾಬಾದ್​ನಲ್ಲಿ ಇಂದು ಚಿನ್ನದ ದರ ಸ್ಥಿರತೆ ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 65,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿಯೂ ಸಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ವೀಕೆಂಡ್​ನಲ್ಲಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ

Published On - 7:19 am, Mon, 11 October 21

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು