Gold and Silver Price Today | ಬೆಂಗಳೂರು: ನಿನ್ನೆ ಕೆಲವೆಡೆ ಚಿನ್ನದ ದರ ಸ್ಥಿರವಾಗಿದ್ದರೆ, ಇನ್ನು ಕೆಲವೆಡೆ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಬೆಳ್ಳಿ ದರದಲ್ಲಿ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕೊಂಚ ಏರಿಕೆ ಆಗಿತ್ತು. ಆ ಬಳಿಕ ಇಂದು (ಅಕ್ಟೋಬರ್ 11, ಸೋಮವಾರ) ಚಿನ್ನದ ದರ (Gold Price) ಕೆಲವೆಡೆ ಸ್ಥಿರವಾಗಿಯೇ ಇದೆ. ಬೆಳ್ಳಿ ದರದಲ್ಲಿ (Silver Price) ಇಂದು ಇಳಿಕೆ ಕಂಡು ಬಂದಿದೆ. ಚಿನ್ನ, ಬೆಳ್ಳಿ ಖರೀದಿಸುವ ಆಸೆ ಇದ್ದರೆ ಬೆಲೆ ಎಷ್ಟಿದೆ ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,39,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,200 ರೂಪಾಯಿ ಇಳಿಕೆ ಆಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,420 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,84,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 65,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
ಹೈದರಾಬಾದ್ನಲ್ಲಿ ಇಂದು ಚಿನ್ನದ ದರ ಸ್ಥಿರತೆ ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 65,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿಯೂ ಸಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ಇದನ್ನೂ ಓದಿ:
Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?
Gold Price Today: ವೀಕೆಂಡ್ನಲ್ಲಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ
Published On - 7:19 am, Mon, 11 October 21