Gold Price Today: ಕೆಲವೆಡೆ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ಆಭರಣ ದರ ವಿವರ ಪರಿಶೀಲಿಸಿ

Gold Rate Today: ಇಂದು ಕೆಲವೆಡೆ ಚಿನ್ನದ ದರ ಸ್ಥಿರತೆ ಕಾಯ್ದುಕೊಂಡಿದೆ, ಇನ್ನು ಕೆಲವೆಡೆ ಏರಿಕೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಆಭರಣ ಖರೀದಿಸಲು ಯೋಚಿಸಿದ್ದರೆ ದರ ವಿವರ ಪರಿಶೀಲಿಸಿ.

Gold Price Today: ಕೆಲವೆಡೆ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ಆಭರಣ ದರ ವಿವರ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Oct 14, 2021 | 7:31 AM

Gold and Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಏರಿಕೆ ಕಂಡಿತ್ತು. ಜತೆಗೆ ಬೆಳ್ಳಿ ಬೆಲೆಯಲ್ಲಿಯೂ (Gold Price) ಏರಿಕೆ ಆಗಿತ್ತು. ಆ ಬಳಿಕ ಇಂದು (ಅಕ್ಟೋಬರ್​ 14, ಗುರುವಾರ) ಕೆಲವೆಡೆ ಚಿನ್ನದ ದರ (Gold Price) ಸ್ಥಿರತೆ ಕಾಯ್ದುಕೊಂಡಿದೆ, ಇನ್ನು ಕೆಲವೆಡೆ ಏರಿಕೆ ಕಂಡು ಬಂದಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ನೀವು ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಿದ್ದರೆ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,150 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,41,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,600 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 62,100 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,44,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 140 ರೂಪಾಯಿಯಷ್ಟು ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,84,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಇನ್ನು, ಬೆಳ್ಳಿ ಬೆಲೆ ಸ್ಥಿರವಾಗಿದೆ. ಕೆಜಿ ಬೆಳ್ಳಿಗೆ 65,800 ರೂಪಾಯಿ ನಿಗದಿ ಆಗಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,41,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಏರಿಳಿತಗಳಿಲ್ಲ. ಬೆಳ್ಳಿ ದರವೂ ಸಹ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,800 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ವೀಕೆಂಡ್​ನಲ್ಲಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ

Gold Price Today: ಇಂದೂ ಏರಿಕೆ ಕಂಡ ಚಿನ್ನದ ದರ; ಬೆಳ್ಳಿ ಬೆಲೆಯೂ ಕೊಂಚ ಹೆಚ್ಚಳ!

Published On - 7:23 am, Thu, 14 October 21

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ