Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?
ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಬಹುದೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
Gold and Silver Price Today | ಬೆಂಗಳೂರು: ಚಿನ್ನ ಕೊಳ್ಳುವ ಸಮಯದಲ್ಲಿ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಬಹುದೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಅಕ್ಟೋಬರ್ 23, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಇದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಯಾವುದೇ ಏರಿಳಿತ ಕಂಡು ಬಂದಿಲ್ಲ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಆಗಿದೆ. ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಇಂದು ಚಿನ್ನದ ದರ ಸ್ಥಿರವಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,840 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,48,400 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,200 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 69,800 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿ ಆಗಿದೆ. ಇನ್ನು, ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ. ಸುಮಾರು 4,900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಕಳೆದ ಕೆಲವು ದಿನಗಳಿಂದ ಗಮನಿಸಿದಾಗ ಚಿನ್ನದ ದರ ಏರಿಕೆ ಇಳಿಕೆಯಾಗುತ್ತಲೇ ಇದೆ. ಬೆಳ್ಳಿ ದರದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಇನ್ನು ಕೆಲವೆಡೆ ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಮದುವೆ ಸಮಾರಂಭಗಳಿಗಾಗಿ ಚಿನ್ನ, ಬೆಳ್ಳಿಯ ಆಭರಣಗಳನ್ನು ಖರೀಸುವುದು ಪ್ಲ್ಯಾನ್ ಮಾಡಿದ್ದರೆ, ನೀವು ಅದೆಷ್ಟೋ ವರ್ಷಗಳಿಂದ ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಬಹುದು. ಆ ಕುರಿತಾಗಿ ಯೋಚಿಸಿ.
ಇದನ್ನೂ ಓದಿ: Gold Price Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಇಳಿಕೆ
Gold Price Today: ಬೆಂಗಳೂರಿನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿಯೂ ಹೆಚ್ಚಳ
Published On - 7:21 am, Sat, 23 October 21