Gold and Silver Price Today | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗಮನಿಸಿದಾಗ ಚಿನ್ನದ ದರ ಏರಿಕೆ ಆಗುತ್ತಲೇ ಇದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ (Gold Price) ಏರಿಕೆಯಾಗಿದೆ. ಇಂದು ಭಾನುವಾರ ಸಹ (ಅ.24) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಅದೇ ರೀತಿ ಬೆಳ್ಳಿ ದರದಲ್ಲಿಯೂ (Silver Price) ಸಹ ಇಂದು ಹೆಚ್ಚಳವಾಗಿದೆ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ದರ ಎಷ್ಟಿದೆ? ಚಿನ್ನ ಕೊಳ್ಳುವ ಆಸೆ ಇದ್ದರೆ ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದೇ? ಈ ಕುರಿತಾದ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,750 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,47,500 ರೂಪಾಯಿ ಇದೆ. ಇನ್ನು ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿದ್ದು, 200 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 65,600 ರೂಪಾಯಿ ನಿಗದಿಯಾಗಿದೆ.
ಚಿನ್ನ, ಬೆಳ್ಳಿ ಖರೀದಿಸುವಾಗ ದರ ಕೊಂಚ ಇಳಿಕೆ ಆಗಿರಲಿ ಎಂಬ ಆಸೆ ತಪ್ಪೇನಲ್ಲ. ಆದರೆ ಚಿನ್ನದ ದರ ಏರಿಕೆಯತ್ತ ಸಾಗಿರುವಾಗ ಆಭರಣ ಕೊಳ್ಳಲು ಮನಸ್ಸು ವಾಲುವುದೇ ಇಲ್ಲ. ಆದರೆ ಮದುವೆ ಸಮಾರಂಭಗಳು ಎದುರಿಗಿದ್ದಾಗ ಅಥವಾ ಮನೆಯಲ್ಲಿ ವಿಶೇಷ ಪೂಜೆ ಇದ್ದಲ್ಲಿ ಅನಿವಾರ್ಯವಾಗಿ ಚಿನ್ನವನ್ನು ಅಥವಾ ಪೂಜೆಗೆ ಬೇಕಾದ ಬೆಳ್ಳಿಯ ಸಾಮಗ್ರಿಗಳನ್ನು ಕೊಳ್ಳಲೇ ಬೇಕಾಗುತ್ತದೆ. ಇಂತಹ ಸಮಯದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಕೇವಲ ಆಭರಣ ತೊಟ್ಟು ಸಂತೋಷ ಪಡುವುದೊಂದೇ ಅಲ್ಲದೇ ಹೂಡಿಕೆಯ ದೃಷ್ಟಿಯಿಂದಲೂ ಚಿನ್ನವನ್ನು ಖರೀದಿಸುತ್ತಾರೆ. ಹಾಗಾಗಿಯೇ ಚಿನ್ನದ ದರ ಏರಿಳಿತದ ಬಗ್ಗೆ ಕುತೂಹಲ ಕೊಂಚ ಹೆಚ್ಚು ಎಂದರೆ ತಪ್ಪಾಗಲಾರದು.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ಸುಮಾರು 3,100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ಸುಮಾರು 3,300 ರೂಪಾಯಿ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 69,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,500 ರೂಪಾಯಿ ನಿಗದಿಯಾಗಿದೆ. ಸುಮಾರು 2,000 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ಸುಮಾರು 2,200 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲೂ ಸಹ ಇಂದು ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 69,900 ರೂಪಾಯಿ ನಿಗದಿಯಾಗಿದೆ. ಸುಮಾರು 4,600 ರೂಪಾಯಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?
Published On - 7:41 am, Sun, 24 October 21