Gold and Silver Price Today | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರುತ್ತಲೇ ಇದೆ. ಅದೇ ರೀತಿ ಇಂದು ಸೋಮವಾರ (ಅ.25) ಚಿನ್ನದ ದರ ಮತ್ತಷ್ಟು ಹೆಚ್ಚಳವಾಗಿದೆ. ಇದು ಗ್ರಾಹಕರಿಗೆ ಕೊಂಚ ಬೇಸರ ತರುವ ವಿಚಾರ. ಮನೆಯಲ್ಲಿ ಪೂಜೆ, ವಿಶೇಷ ಆಚರಣೆಯ ಪ್ರಯುಕ್ತ ಚಿನ್ನ (Gold Price), ಬೆಳ್ಳಿಯ ಅಭರಣ ಖರೀದಿಸಬೇಕು ಅಂದುಕೊಂಡಿರುತ್ತೀರಿ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ (Silver Price) ಆಭರಣದ ಬೆಲೆ? ನಿಮ್ಮೂರಿನಲ್ಲಿ ದರ ಎಷ್ಟಿದೆ? ದೈನಂದಿನ ದರ ಬದಲಾವಣೆಯಲ್ಲಿ ಎಷ್ಟು ಏರಿಕೆಯಾಗಿದೆ? ಎಂಬುದರ ಕುರಿತಾದ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು 100 ರೂಪಾಯಿಯಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಆ ಬಳಿಕ ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆ ಆಗಿದೆ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಹೆಚ್ಚಳವಾಗಿದೆ. ಇಂದು ಬೆಳ್ಳಿ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 69,900 ರೂಪಾಯಿ ನಿಗದಿಯಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,660 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,66,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,660 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 65,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
ಇದನ್ನೂ ಓದಿ:
Gold Price Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಇಳಿಕೆ
Published On - 7:29 am, Mon, 25 October 21