Gold and Silver Price Today | ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಆಭರಣ ಕೊಳ್ಳುವಾಗ ಬೆಲೆ ಇಳಿಕೆಯತ್ತ ಸಾಗಿರಲಿ ಎಂಬ ಆಸೆಯೂ ತಪ್ಪಲ್ಲ. ನಿನ್ನೆ ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಶುಕ್ರವಾರ (ಅ.29) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ (Silver Price) ಕೆಲವೆಡೆ ಇಳಿಕೆಯಾಗಿದೆ. ಹಾಗಿರುವಾಗ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bengaluru Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 65,000 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಏರಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ದರ ಇಳಿಕೆ ಕಂಡಿದ್ದು ಕೆಜಿ ಬೆಳ್ಳಿಗೆ 69,100 ರೂಪಾಯಿ ಇಳಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಆಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,09,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು 100 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 69,100 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಚಿನ್ನದ ದರ ಇಳಿಕೆ ಕಂಡಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Published On - 7:39 am, Fri, 29 October 21