AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ

Gold Rate Today: ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಇಂದು ಪ್ರಮುಖ ಮಹಾ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಪರಿಶೀಲಿಸಿ.

Gold Price Today: ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 05, 2021 | 9:09 AM

Share

Gold Silver Rate Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. ಇಂದು ( ಅಕ್ಟೋಬರ್ 4, ಮಂಗಳವಾರ) ಕೆಲವೆಡೆ ಚಿನ್ನದ ದರ (Gold Price) ಏರಿಕೆ ಕಂಡಿದ್ದರೆ ಇನ್ನು ಕೆಲವೆಡೆ ಇಳಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ (Silver Price) ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಇಂದು ಪ್ರಮುಖ ಮಹಾ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಪರಿಶೀಲಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,35,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಇಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,74,700 ರೂಪಾಯಿ ನಿಗದಿ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ಬೆಲೆ 60,500 ರೂಪಾಯಿ ಇದೆ.

ಮನೆಯಲ್ಲಿ ಮದುವೆ ಸಮಾರಂಭಗಳಿದ್ದಾಗ ಚಿನ್ನ ಖರೀದಿಸಬೇಕು ಎಂಬ ಆಸೆ ಇರುತ್ತದೆ. ಅದಕ್ಕಾಗಿಯೇ ಅದೆಷ್ಟೋ ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತೇವೆ. ಅದರಲ್ಲಿಯೂ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಾಗ ಆಭರಣಕ್ಕಾಗಿ ಮುಗಿ  ಬೀಳುವವರ ಸಂಖ್ಯೆ ಹೆಚ್ಚು. ಇಂದು ಆಭರಣಗಳ ದರ ವಿವರ ಎಷ್ಟಿದೆ ಪರಿಶೀಲಿಸಿ ನೀವು ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸಬಹುದು ಎಂದೆನೆಸಿದರೆ ಇನ್ನೇಕೆ ತಡ!

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಕೊಂಚ ಏರಿಕೆಯಾಗಿದೆ. ಸುಮಾರು 900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 60,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನದ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,38,200 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,800 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,78,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿ ಇಳಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆ ಬಳಿಕ 64,800 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಇದೆಯಾ? ಆಭರಣಗಳ ಬೆಲೆ ಇಳಿಕೆಯಾಗಿದೆ!

Gold Price Today: ಕೆಲವೆಡೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ!

Published On - 7:39 am, Tue, 5 October 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್