Gold Price Today: ಇಂದು ಚಿನ್ನದ ದರದಲ್ಲಿ ಇಳಿಕೆ; ಚಂದದ ಕಿವಿಯೋಲೆ ಖರೀದಿಸುವ ಆಸೆ ಇದ್ದರೆ ಆಭರಣದ ಬೆಲೆ ಎಷ್ಟಿದೆ ಗಮನಿಸಿ

Gold Rate Today: ಚಿನ್ನ, ಬೆಳ್ಳಿ ಆಭರಣಗಳನ್ನು ಖರೀದಿಸುವ ಪ್ಲ್ಯಾನ್​ ಇದ್ದರೆ ಇಂದು ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದು ಚಿನ್ನದ ದರದಲ್ಲಿ ಇಳಿಕೆ; ಚಂದದ ಕಿವಿಯೋಲೆ ಖರೀದಿಸುವ ಆಸೆ ಇದ್ದರೆ ಆಭರಣದ ಬೆಲೆ ಎಷ್ಟಿದೆ ಗಮನಿಸಿ
ಸಂಗ್ರಹ ಚಿತ್ರ

Gold and Silver Price Today | ಬೆಂಗಳೂರು: ಹಬ್ಬ ಎದುರು ಬಂದಾಗಲಂತೂ ಚಿನ್ನ ಖರೀದಿಸುವ ಪ್ಲ್ಯಾನ್​ ಇದ್ದೇ ಇರುತ್ತದೆ. ಅದರಲ್ಲಿಯೂ ಭಾರತದಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಕೊಂಚ ಜಾಸ್ತಿಯೇ ಇದೆ ಎಂದರೆ ತಪ್ಪಾಗಲಾರದು, ಅದೇ ರೀತಿ ಹಬ್ಬದ ಸಮಾರಂಭಗಳೂ ಹೆಚ್ಚು. ಹಾಗಿರುವಾಗ ನವರಾತ್ರಿ ವಿಶೇಷದಂದು ಮಹಿಳೆಯರೆಲ್ಲಾ ಸಂತೋಷದಿಂದ ಹಬ್ಬವನ್ನು ಆಚರಿಸುವ ಪ್ಲ್ಯಾನ್ ಮಾಡಿರುತ್ತೀರಿ. ನವರಾತ್ರಿ ವಿಶೇಷಕ್ಕೆಂದೇ ಚಿನ್ನಾಭರಣ ಖರೀಸುವ ಕುರಿತಾಗಿ ಯೋಚಿಸಿರುತ್ತೀರಿ. ಹೀಗಿರುವಾಗ ಮಾರುಕಟ್ಟೆಯಲ್ಲಿ ಚಿನ್ನ (Gold Price), ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ ಅಲ್ವೇ? ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಚಿನ್ನಾಭರಣಗಳ ಬೆಲೆ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಖುಷಿಯ ವಿಚಾರ ಎಂದರೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ 43,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,36,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 60,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆಯಾಗಿದೆ.

ಚಿನ್ನದ ಆಭರಣ ಖರಿದೀಸುವ ಆಸೆ ಇದ್ದಾಗ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆ ತಪ್ಪೇನಲ್ಲ. ಅಷ್ಟೊಂದು ದುಬಾರಿ ವಸ್ತುಗಳನ್ನು ಕೊಳ್ಳುವಾಗ ಅದೆಷ್ಟೋ ವರ್ಷಗಳಿಂದ ಕೂಡಿಡುತ್ತಾ ಬಂದ ಹಣವನ್ನು ವ್ಯಯಿಸುವಾಗ ಸ್ವಲ್ಪ ಪ್ರಮಾಣದಲ್ಲಾದರೂ ದರ ಇಳಿಕೆ ಕಾಣಲಿ ಎಂಬ ಆಸೆ ಇದ್ದೇ ಇರುತ್ತದೆ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ, ಬೆಳ್ಳಿ ಬೆಲೆ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆಯಾಗಿದೆ. ಆದರೆ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,200 ರೂಪಾಯಿ ನಿಗದಿಯಾಗಿದೆ. ಸುಮಾರು 1,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಇಳಿಕೆ ಕಂಡು ಬಂದಿದೆ. ಇನ್ನು ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಓದಿ:

Gold Price Today: ಇಂದು ಸಹ ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡಿದೆ! ಆಭರಣ ಕೊಳ್ಳುವವರು ದರ ವಿವರ ಪರಿಶೀಲಿಸಿ

Gold Price Today: ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಆಭರಣ ಕೊಳ್ಳುವುದಾದರೆ ದರ ವಿವರ ಪರಿಶೀಲಿಸಿ

Read Full Article

Click on your DTH Provider to Add TV9 Kannada