Gold and Silver Price Today | ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಆದರೂ ಸಹ ಚಿನ್ನದ ದರ (Gold Price) ಇಳಿಕೆಯತ್ತ ಸಾಗಿದ್ದಾಗಲೇ ಆಭರಣ ಖರೀದಿಸಬೇಕು ಎಂಬ ಆಸೆ ಇದ್ದೇ ಇರುತ್ತದೆ. ನಿನ್ನೆ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಬೆಳ್ಳಿ ದರದಲ್ಲಿ (Silver Price) ಕೊಂಚ ಏರಿಕೆಯಾಗಿತ್ತು. ಇಂದು (ಅಕ್ಟೋಬರ್ 8, ಶುಕ್ರವಾರ) ಚಿನ್ನದ ದರ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಸಹ ಏರಿದೆ.
ಚಿನ್ನ ಖರೀದಿಸಲು ಪ್ಲ್ಯಾನ್ ಮಾಡಿದ್ದಾಗ ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಹಾಗಿರುವಾಗ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ? ದೈನಂದಿನ ದರ ಬದಲಾವಣೆಯಲ್ಲಿ ಏರಿಕೆಯಾಗಿದೆಯೋ? ಇಳಿದಿದೆಯೋ? ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರವೆಷ್ಟು? ಎಂಬೆಲ್ಲಾ ಮಾಹಿತಿಗಳು ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,38,000 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,77,800 ರೂಪಾಯಿ ನಿಗದಿಯಾಗಿದೆ. ಸುಮಾರು 2,200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ನಿಗದಿ ಆಗಿದೆ. ಸುಮಾರು 500 ರೂಪಾಯಿ ಏರಿಕೆ ಕಂಡು ಬಂದಿದೆ.
ಬೆಂಗಳೂರು, ಚೆನ್ನೈ ಸೇರಿದಂತೆಯೇ ದೆಹಲಿ, ಜೈಪುರ ಮುಂಬೈ, ಹೈದರಾಬಾದ್ ಹೀಗೆ ಎಲ್ಲಾ ಕಡೆಗಳಲ್ಲಿಯೂ ಸಹ ಇಂದು ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಏರಿಕೆ ಕಂಡು ಬಂದಿದೆ. ನವರಾತ್ರಿ ಹಬ್ಬ ನಡೆಯುತ್ತಿರುವುದರಿಂದ ಆಭರಣ ಖರೀದಿಸಲು ಮುಂದಾಗಿದ್ದರೆ, ದರ ವಿವರ ಪರಿಶೀಲಿಸಿ, ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯನ್ನು ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,41,100 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಏರಿಳಿತದಲ್ಲಿ ಸುಮಾರು 2,100 ರೂಪಾಯಿ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆ 65,200 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಚಿನ್ನ, ಬೆಳ್ಳಿ ದರ ಏರಿಕೆ; ಬೆಂಗಳೂರು, ಚೆನ್ನೈ, ಮುಂಬೈನಲ್ಲಿ ಆಭರಣದ ಬೆಲೆ ಹೀಗಿದೆ
Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತಷ್ಟು ಇಳಿಕೆ; ಗ್ರಾಹಕರಿಗೆ ಸಂತೋಷ ನೀಡುವ ವಿಚಾರ