AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸುವುದಾದರೆ ಇಲ್ಲಿದೆ ದರ ವಿವರ

Gold Rate Today: ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 04, ಶುಕ್ರವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಏರಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Price: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸುವುದಾದರೆ ಇಲ್ಲಿದೆ ದರ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 04, 2022 | 7:33 AM

Share

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 04, ಶುಕ್ರವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಏರಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ದಾಖಲಾಗಿದೆ. ಸುಮಾರು 4,100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,600 ರೂಪಾಯಿ ನಿಗದಿಯಾಗಿದೆ. ಸುಮಾರು 2,200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,900 ರೂಪಾಯಿ ನಿಗದಿಯಾಗಿದೆ. ಸುಮಾರು 2,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,200 ರೂಪಾಯಿ ಬದಲಾವಣೆಯಾಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,500 ರೂಪಾಯಿ ನಿಗದಿಯಾಗಿದೆ. ಸುಮಾರು 6,700 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 61,400 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Price: ಫೆಬ್ರವರಿ ತಿಂಗಳ ಮೊದಲ ದಿನದಂದೇ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಇಲ್ಲಿದೆ ದರ ವಿವರ

Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ

Published On - 7:20 am, Fri, 4 February 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್